Alto K10: ಬಡವರು ಕಾರು ತೆಗೆದುಕೊಳ್ಳಬಹುದು.. ಮಾರುತಿ ಆಲ್ಟೊ ಕೆ10ಗೆ ಭಾರೀ ರಿಯಾಯಿತಿ, ರೂ.4 ಲಕ್ಷ ಬೆಲೆ
ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ತಮ್ಮ ಪುಟ್ಟ ಕುಟುಂಬಕ್ಕಾಗಿ ನೂತನ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ನಾನಾ ಕಾರಣಗಳಿಗೆ ಅದು ಸಾಧ್ಯವಾಗುವುದಿಲ್ಲ. ಆದರೆ, ಈ ಮಾರ್ಚ್‌ನಲ್ಲಿ ಮಾರುತಿ ಸುಜುಕಿಯ ಆರಂಭಿಕ ಮಾದರಿ ಆಲ್ಟೊ ಕೆ10 ಗರಿಷ್ಠ ರಿಯಾಯಿತಿ ಪ್ರಯೋಜವನ್ನು ಹೊಂದಿದೆ.
ನೀವು ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರನ್ನು ಖರೀದಿಸಲು ಯೋಚಿಸಿದ್ದರೆ ನಿಮ್ಮ ಬಜೆಟ್ ಬೆಲೆಗೆ ಉತ್ತಮ ಆಯ್ಕೆಯಾಗಬಹುದು. ಇದರ ಆಟೋಮೆಟಿಕ್ ರೂಪಾಂತರಗಳು ಒಟ್ಟು ರೂ.62,000, ಮ್ಯಾನುವಲ್ ಆವೃತ್ತಿಗಳು ರೂ.57,000 ಮತ್ತು ಸಿಎನ್‌ಜಿ ಮಾದರಿಗಳು ರೂ.40,000 ಡಿಸ್ಕೌಂಟ್ ಆಫರ್ ಅನ್ನು ಪಡೆದಿವೆ.

ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಗ್ರಾಹಕರಿಗೆ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಒಳಗೊಂಡಂತೆ 4 ರೂಪಾಂತರ ಮತ್ತು ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರು ವಿನ್ಯಾಸದ ವಿಚಾರದಲ್ಲೂ ಅತ್ಯುತ್ತಮವಾಗಿದ್ದು, 4 ರಿಂದ 5 ಮಂದಿ ಪ್ರಯಾಣಿಸಬಹುದು.
ಮಾರುತಿ ಸುಜುಕಿ ಆಲ್ಟೊ ಕೆ10 ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್ ಹೊಂದಿದೆ. ಆದರೆ, 57 ಪಿಎಸ್ ಪವರ್ ಹಾಗೂ 82 ಎನ್ಎಂ ಪೀಕ್ ಟಾರ್ಕ್ ಹೊರಹಾಕಲು ಶಕ್ತವಾಗಿದೆ.

ಈ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 24.39 ರಿಂದ 24.90 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ವಿಶೇಷವಾಗಿ ಆಲ್ಟೊ ಕಾರು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಒಳಗೊಂಡಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 ಕಾರು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾವನ್ನು ಪಡೆದಿದೆ.

ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಗೆ ರೆನಾಲ್ಟ್ ಕ್ವಿಡ್ ಪ್ರಬಲ ಪ್ರತಿಸ್ಪರ್ಧಿಯಾಗಿದೆ. ನಿಮ್ಮ ಗಮನಕ್ಕೆ.. ಈ ಕಾರಿಗೆ ನೀಡಿರುವ ರಿಯಾಯಿತಿ ಪ್ರಯೋಜನಗಳು ರಾಜ್ಯಗಳಿಂದ ರಾಜ್ಯಕ್ಕೆ ಡೀಲರ್, ರೂಪಾಂತರ, ಹಾಗೂ ಬಣ್ಣಗಳನ್ನು ಬೇರೆ ಇರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications