34 Km ಮೈಲೇಜ್.. 3.99 ಲಕ್ಷದ ಆಲ್ಟೊ ಕಾರಿಗಾಗಿ ಶೋರೂಂ ಎಡತಾಕಿದ ಗ್ರಾಹಕರು.. ದಾಖಲೆ ಸಂಖ್ಯೆಯಲ್ಲಿ ಮಾರಾಟ!
ಮಾರುತಿ ಸುಜುಕಿ (Maruti Suzuki), ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಅದರಲ್ಲೂ ಆಲ್ಟೊ ಕೆ10 (Alto K10) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸೆಪ್ಟೆಂಬರ್ (2024) ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದ್ದು, ಆಲ್ಟೊ ಕೆ10 ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಸೆಪ್ಟೆಂಬರ್ - 2024) ಮಾರುತಿ ಸುಜುಕಿ ಕಂಪನಿಯು ಬರೋಬ್ಬರಿ 8,655 ಯುನಿಟ್ 'ಆಲ್ಟೊ ಕೆ10' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 7,791 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 11% ಬೆಳವಣಿಗೆ ಸಾಧಿಸಿದೆ.

ಆಗಸ್ಟ್‌ನಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ 8,546 ಯುನಿಟ್, ಜುಲೈನಲ್ಲಿ 7,353 ಯುನಿಟ್ ಮತ್ತು ಜೂನ್ ತಿಂಗಳಲ್ಲಿ 7,775 ಯುನಿಟ್‌ನ್ನು ಮಾರಾಟ ಮಾಡಲಾಗಿದೆ. ದೇಶಾದ್ಯಂತ ಸೆಪ್ಟೆಂಬರ್‌ನಲ್ಲಿ ಆಲ್ಟೊ ಕೆ10 ಕಾರಿನ ಖರೀದಿ ಮೇಲೆ ಆಯ್ದ ಅರೆನಾ ಡೀಲರ್‌ಶಿಪ್‌ಗಳು ಘೋಷಿಸಿದ ಭಾರಿ ರಿಯಾಯಿತಿ ಹಾಗೂ ಕಂಪನಿ ಸ್ವಲ್ಪ ಮಟ್ಟಿಗೆ ಬೆಲೆ ಇಳಿಕೆ ಮಾಡಿದ್ದರ ಪರಿಣಾಮ, ಮಾರಾಟ ಪ್ರಮಾಣವು ಸುಧಾರಿಸಿದೆ ಎಂದು ವಿಶ್ಲೇಷಿಸಲಾಗಿದೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್‌ನ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.3.99 ಲಕ್ಷ ಬೆಲೆಯನ್ನು ಹೊಂದಿದೆ. ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ರೂ.5.96 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.

ಈ ಮಾರುತಿ ಸುಜುಕಿ ಆಲ್ಟೊ ಕೆ10 ಕಾರಿನ 1-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಸಿಎನ್‌ಜಿ ಚಾಲಿತ ಮಾದರಿಯೂ (ಮಾಡೆಲ್) ಇದೇ 1-ಲೀಟರ್ ಎಂಜಿನ್‌ನ್ನು ಪಡೆದಿದ್ದು, 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಮಾತ್ರ ಹೊರಹಾಕುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯುತ್ತದೆ. ಈ ಕಾರು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನಲ್ಲಿ 4 ಜನರು ಸಂಚರಿಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು) ಮತ್ತು ಡಿಜಿಟಲ್-ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಹಾಗೂ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಒಟ್ಟಾರೆಯಾಗಿ, ದಸರಾ ಹಬ್ಬ ಮುಗಿದಿದೆ. ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಬರುತ್ತಿರುವುದರಿಂದ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ್ನು ಹೆಚ್ಚಿನ ಗ್ರಾಹಕರು ತಮ್ಮ ಆಯ್ಕೆಯ ವಾಹನವಾಗಿ ಪರಿಗಣಿಸಬಹುದು. ಈ ಅಕ್ಟೋಬರ್‌ನಲ್ಲಿ ವಿವಿಧ ಅರೆನಾ ಡೀಲರ್‌ಶಿಪ್‌ಗಳು ಸಾಕಷ್ಟು ಹಣಕಾಸಿನ ಪ್ರಯೋಜನಗಳನ್ನು ಘೋಷಿಸಿವೆ. ಇದರೊಂದಿಗೆ ಆಲ್ಟೊ ಕಾರುಗಳ ಮಾರಾಟ ಅಧಿಕಗೊಳಿಸಲು ಯೋಜಿಸಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications