6.66 ಲಕ್ಷ.. 30 Km ಮೈಲೇಜ್.. ಇದು ಬೆಸ್ಟ್‌ ಪ್ರೀಮಿಯಂ ಕಾರು: ಮಾರಾಟ ಕುಸಿತ.. ಆದರೂ 8ನೇ ಸ್ಥಾನ!

ದೇಶದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ನೆಕ್ಸಾ ಮತ್ತು ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಫ್ರಾಂಕ್ಸ್ ಹಾಗೂ ಜಿಮ್ನಿ ಒಳಗೊಂಡಂತೆ ಹಲವು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಕ ಕಂಪನಿಗಳು ಆಗಸ್ಟ್ ತಿಂಗಳ (2024) ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ (Baleno) ಕೂಡ ಇದ್ದು, 8ನೇ ಸ್ಥಾನದಲ್ಲಿದೆ.

ಮಾರುತಿ ಸುಜುಕಿ, ಆಗಸ್ಟ್‌ನಲ್ಲಿ (2024) ಸರಿ ಸುಮಾರು 12,485 ಯುನಿಟ್ ಬಲೆನೊ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 18,653 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ -31% ಹಿನ್ನಡೆಯಾಗಿದೆ. ಪ್ರಖ್ಯಾತ ಹ್ಯಾಚ್‌ಬ್ಯಾಕ್‌ ಆಗಿದ್ದರೂ, ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ ಮಾರಾಟ ಪ್ರಮಾಣ ಇಳಿಕೆಯಾಗಿರುವ ಬಗ್ಗೆ ಸ್ಪಷ್ಟವಾದ ಕಾರಣಗಳು ತಿಳಿದುಬಂದಿಲ್ಲ. ಆದಾಗ್ಯೂ, ಮುಂಬರುವ ತಿಂಗಳಲ್ಲಿ ಮಾರಾಟವು ಚೇತರಿಸಿಕೊಳ್ಳುವ ಸಾಧ್ಯತೆಯಿದೆ.

Maruti Suzuki Baleno Car August 2024 Sales Report Rs 6 66 Lakh Price 30 Km Mileage

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಹ್ಯಾಚ್‌ಬ್ಯಾಕ್‌, ರೂ.6.66 ಲಕ್ಷದಿಂದ ರೂ.9.83 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಸಿಗುತ್ತದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಪಾ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಬಲೆನೊ ಹ್ಯಾಚ್‌ಬ್ಯಾಕ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಈ ಕಾರು ಗರಿಷ್ಠ ಇಂಧನ ದಕ್ಷತೆಯನ್ನು (Fuel Efficiency) ಒದಗಿಸಲಿದ್ದು, 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Baleno Car August 2024 Sales Report Rs 6 66 Lakh Price 30 Km Mileage

ಈ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಬಲೆನೊ ಹ್ಯಾಚ್‌ಬ್ಯಾಕ್‌ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Baleno Car August 2024 Sales Report Rs 6 66 Lakh Price 30 Km Mileage

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 10, 2024, 8:30 [IST]
English summary
Maruti suzuki baleno car august 2024 sales report rs 6 66 lakh price 30 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+