Maruti Suzuki Baleno: ಪ್ರೀಮಿಯಂ ಮಾರುತಿ ಸುಜುಕಿ ಬಲೆನೊಗೆ ಭಾರೀ ರಿಯಾಯಿತಿ, ಈಗಲೇ ಬುಕ್ಕಿಂಗ್ ಮಾಡಿ

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯತೆ ಗಳಿಸಿದೆ. ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ (Baleno), ಕಳೆದ ಕೆಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಈ ತಿಂಗಳು ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಪಡೆದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮಾರುತಿ ಸುಜುಕಿ ಬಲೆನೊ ಮಾದರಿಗಳು, ಜನವರಿಯಲ್ಲಿ ರೂ.29,000 ರಿಂದ ರೂ.44,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಇದು ನಗದು ರಿಯಾಯಿತಿ (Cash discounts), ವಿನಿಮಯ ಬೋನಸ್ (Exchange bonuses) ಮತ್ತು ಕಾರ್ಪೊರೇಟ್ ಬೋನಸ್ (Corporate bonuses) ಅನ್ನು ಒಳಗೊಂಡಿದೆ. ಆದರೆ ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ರೂಪಾಂತರಗಳನ್ನು ಆಧರಿಸಿ, ಬೇರೆಯಿರಲಿದ್ದು, ಹೆಚ್ಡಿನ ವಿವರಗಳಿಗಾಗಿ ಸಮೀಪದ ಶೋರೂಂ ಸಂಪರ್ಕಿಸಿರಿ.

Maruti Suzuki Baleno: ಪ್ರೀಮಿಯಂ ಮಾರುತಿ ಸುಜುಕಿ ಬಲೆನೊಗೆ ಭಾರೀ ರಿಯಾಯಿತಿ, ಈಗಾಗಲೇ ಬುಕ್ಕಿಂಗ್ ಮಾಡಿ

ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕಾರುಗಳನ್ನು ನೆಕ್ಸಾ (NEXA) ಡೀಲರ್ ಮೂಲಕ ಮಾರಾಟಗೊಳಿಸಲಾಗುತ್ತಿದೆ. ಈ ಹ್ಯಾಚ್‌ಬ್ಯಾಕ್ ರೂ.6.61 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ, ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡರ್ ಗ್ರೇ ಸೇರಿದಂತೆ 7 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

ಈ ಮಾರುತಿ ಸುಜುಕಿ ಬಲೆನೊ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ನೊಂದಿಗೆ ಲಭ್ಯವಿದೆ. ಇದರ 1.2 - ಲೀಟರ್ ಪೆಟ್ರೋಲ್ ಎಂಜಿನ್, 90 PS ಗರಿಷ್ಠ ಪವರ್, 113 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

Maruti Suzuki Baleno: ಪ್ರೀಮಿಯಂ ಮಾರುತಿ ಸುಜುಕಿ ಬಲೆನೊಗೆ ಭಾರೀ ರಿಯಾಯಿತಿ, ಈಗಾಗಲೇ ಬುಕ್ಕಿಂಗ್ ಮಾಡಿ

ಸಿಎನ್‌ಜಿ ಚಾಲಿತ ಕಾರು ಕೂಡ ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ 77.49 PS ಪವರ್, 98.5 Nm ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ರೂಪಾಂತರಗಳು 22.35 kmpl - 22.94 kmpl, ಸಿಎನ್‌ಜಿ ರೂಪಾಂತರಗಳು 30.61 km/kg ಇಂಧನ ದಕ್ಷತೆಯನ್ನು ಹೊಂದಿವೆ.

ಮಾರುತಿ ಸುಜುಕಿ ಬಲೆನೊ 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಸಿಗಲಿದ್ದು, ಐಡಲ್ ಸ್ಟಾರ್ಟ್/ ಸ್ಟಾಪ್ ಟೆಕ್ನಲಾಜಿಯನ್ನು ಪಡೆದಿದೆ. ವೈಶಿಷ್ಟ್ಯಗಳ ಕುರಿತು ಹೇಳುವುದಾದರೆ, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಯಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4 ಸ್ಪೀಕರ್‌ಗಳನ್ನು ಒಳಗೊಂಡ ಸೌಂಡ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ.

Maruti Suzuki Baleno: ಪ್ರೀಮಿಯಂ ಮಾರುತಿ ಸುಜುಕಿ ಬಲೆನೊಗೆ ಭಾರೀ ರಿಯಾಯಿತಿ, ಈಗಾಗಲೇ ಬುಕ್ಕಿಂಗ್ ಮಾಡಿ

ಸುರಕ್ಷತೆಯ ವಿಚಾರದಲ್ಲಿಯೂ ಈ ಕಾರು, ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ - ಹೋಲ್ಡ್ ಅಸಿಸ್ಟ್, ಎಲ್ಲ ಪ್ರಯಾಣಿಕರಿಗಾಗಿ 3-ಪಾಯಿಂಟ್ ಸೀಟ್‌ಬೆಲ್ಟ್‌, ISOFIX ಆಂಕಾರೇಜ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಹುಂಡೈ ಐ20, ಟಾಟಾ ಆಲ್ಟ್ರೋಜ್ ಹಾಗೂ ಟೊಯೊಟಾ ಗ್ಲಾನ್ಜಾ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, January 8, 2024, 13:28 [IST]
English summary
Maruti suzuki baleno car get upto rs 44000 january 6 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+