6.66 ಲಕ್ಷ.. 30 Km ಮೈಲೇಜ್, 5-ಸೀಟರ್.. ಈ ಜನಪ್ರಿಯ ಕಾರಿಗೆ ಮನಸೋತ ಭಾರತೀಯರು..!
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಖರೀದಿದಾರರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಹಾಗೂ ವಿವಿಧ ವಾಹನ ಉತ್ಪಾದನಾ ಕಂಪನಿಗಳು 2024ರ ಜನವರಿಯಿಂದ ಆಗಸ್ಟ್ ತಿಂಗಳವರೆಗಿನ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದವು. ಈ ಅವಧಿಯಲ್ಲಿ ಟಾಟಾ ಪಂಚ್ (142,072 ಯುನಿಟ್) ಮೊದಲ ಸ್ಥಾನದಲ್ಲಿದ್ದರೆ, ಮಾರುತಿ ಸುಜುಕಿ ವ್ಯಾಗನ್ಆರ್ (132,309 ಯುನಿಟ್) ಎರಡನೇ ಸ್ಥಾನದಲ್ಲಿದೆ.
ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಸಹ ಉತ್ತಮ ಬೇಡಿಕೆ ಪಡೆದುಕೊಂಡಿದೆ. ಈ ವರ್ಷದ ಮೊದಲರ್ಧದಲ್ಲಿ (ಜನವರಿ - ಆಗಸ್ಟ್ 2024) ಬರೋಬ್ಬರಿ 116,315 ಯುನಿಟ್ ಬಲೆನೊ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಇದರೊಂದಿಗೆ ಪ್ರಖ್ಯಾತ ಮಹೀಂದ್ರಾ ಸ್ಕಾರ್ಪಿಯೋ (111,350 ಯುನಿಟ್) ಹಾಗೂ ಟಾಟಾ ನೆಕ್ಸಾನ್ (106,517 ಯುನಿಟ್) ಕಾರುಗಳ ಮಾರಾಟ ಸಂಖ್ಯೆಯನ್ನು ಸಹ ಮೀರಿಸಲಾಗಿದೆ.

ಆದಾಗ್ಯೂ ಮಾರುತಿ ಸುಜುಕಿ, ಕಳೆದ ತಿಂಗಳು (ಆಗಸ್ಟ್ 2024) ಸರಿ ಸುಮಾರು 12,485 ಯುನಿಟ್ ಬಲೆನೊ ಹ್ಯಾಚ್‌ಬ್ಯಾಕ್‌ಗಳನ್ನು ಮಾತ್ರ ಮಾರಾಟಗೊಳಿಸಿದೆ. 2023ರ ಆಗಸ್ಟ್‌ನಲ್ಲಿ ಮಾರಾಟ ಮಾಡಿದ 18,653 ಯುನಿಟ್‌ಗೆ ಹೋಲಿಸಿದರೆ ಶೇಕಡ -31% ಕುಸಿತವಾಗಿದೆ. ಈ ವರ್ಷದ ದ್ವಿತೀಯಾರ್ಧದಲ್ಲಿ ಮಾರುತಿ ಸುಜುಕಿ ಬಲೆನೊ ಮಾರಾಟವು ಮತ್ತಷ್ಟು ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.
ಸದ್ಯ ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಮಾರುತಿ ಸುಜುಕಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್, ರೂ.6.66 - ರೂ.9.83 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಪೆಟ್ರೋಲ್ & ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 77.5 ಪಿಎಸ್ ಅಶ್ವ ಶಕ್ತಿ ಹಾಗೂ 98.5 ಎನ್ಎಂ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ದೊರೆಯುತ್ತದೆ. ಈ ಕಾರು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ , ಆಂಡ್ರಾಯ್ಡ್ ಆಟೋ, ಕ್ರೂಸ್ ಕಂಟ್ರೋಲ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications