Baleno: ಜನಪ್ರಿಯ ಮಾರುತಿ ಸುಜುಕಿ ಬಲೆನೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ (Baleno) ಆಕರ್ಷಕ ವೈಶಿಷ್ಟ್ಯ ಹಾಗೂ ವಿನ್ಯಾಸವನ್ನು ಹೊಂದಿದ್ದು, ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಹ್ಯಾಚ್‌ಬ್ಯಾಕ್‌ನ ಸಿಗ್ಮಾ (ಪೆಟ್ರೋಲ್) ಬೇಸ್ ಮಾಡೆಲ್ ರೂ.7.98 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಡೆಲ್ಟಾ (ಪೆಟ್ರೋಲ್) ಮಾದರಿ ರೂ.8.97 ಲಕ್ಷ, ಬೇಸ್ ವೇರಿಯೆಂಟ್ ಮತ್ತು ಅತಿಹೆಚ್ಚು ಮಾರಾಟವಾಗುವ ಡೆಲ್ಟಾ (ಸಿಎನ್‌ಜಿ) ರೂ.10.04 ಲಕ್ಷ , ಟಾಪ್ ಎಂಡ್ ಮಾಡೆಲ್ ಜಿಟಾ (ಸಿಎನ್‌ಜಿ) ರೂ.11.13 ಆನ್-ರೋಡ್ ದರವನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಕಾರನ್ನು ನೀವು ರೂ.80,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.15,191 ಇಎಂಐ ಕಟ್ಟಬೇಕು. ಈ ಹ್ಯಾಚ್‌ಬ್ಯಾಕ್, ವಿನ್ಯಾಸ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಮಾರುತಿ ಸುಜುಕಿ ಬಲೆನೊ ಕಾರಿನ (Maruti Suzuki Baleno) 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಮತ್ತು 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.

ಸಿಎನ್‌ಜಿ ಕಿಟ್ ಪಡೆದಿರುವ ಕಾರು ಸಹ ಇದೇ ಎಂಜಿನ್ ಪಡೆದಿದೆ. ಆದರೆ, 77.5 ಪಿಎಸ್ ಪವರ್ ಮತ್ತು 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 22.35 ರಿಂದ 22.94 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.
ಬಲೆನೊ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ & ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್, ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್, ಸಿಟ್ರಸ್ ಸಿ3 ಹಾಗೂ ಟೊಯೊಟಾ ಗ್ಲಾನ್ಜಾ ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆ ಬಗ್ಗೆ ಮಾತ್ರ ತಿಳಿಸಿಕೊಟ್ಟಿದ್ದೇವೆ. ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications