Maruti Suzuki: ಈ ಕಾರುಗಳನ್ನು ಗ್ರಾಹಕರು ತಾಮುಂದು, ನಾಮುಂದು ಎಂದು ಖರೀದಿಸುತ್ತಿದ್ದಾರೆ.. ರೂ.6 ಲಕ್ಷ ಬೆಲೆ

ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ಕಂಪನಿ ಜನಪ್ರಿಯ ಬಲೆನೊ (Baleno) ಮತ್ತು ಫ್ರಾಂಕ್ಸ್ (Fronx) ಕಾರುಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ವರ್ಷಾರಂಭದ ಜನವರಿ ತಿಂಗಳಲ್ಲಿ ಒಟ್ಟು 33,000 ಯುನಿಟ್ ಕಾರುಗಳು ಮಾರಾಟಗೊಂಡಿವೆ.

ಕಳೆದ ವರ್ಷದ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿ, ಏಪ್ರಿಲ್‌ನಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಫ್ರಾಂಕ್ಸ್ ಕಾಂಪ್ಯಾಕ್ಟ್ ಎಸ್‌ಯುವಿ ದೊಡ್ಡ ಸಂಖ್ಯೆಯಲ್ಲಿ ಬಿಕರಿಯಾಗಿದೆ. ಜನವರಿ (2024)ಯಲ್ಲಿ 13,643 ಯುನಿಟ್ ಫ್ರಾಂಕ್ಸ್ ಕಾರುಗಳನ್ನು ಮಾರಾಟಗೊಳಿಸಲಾಗಿದ್ದು, ಅದರ ಹಿಂದಿನ ತಿಂಗಳಿಗೆ ಹೋಲಿಸಿದರೆ (9,692 ಯುನಿಟ್), ಮಾಸಿಕ (MoM) ಶೇಕಡ 41% ಬೆಳವಣಿಗೆ ಕಂಡಿದೆ.

Maruti Suzuki Baleno, Fronx Car Sales In January 33,000 Unit: 6 Lakh Staring Price

ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್ ಮತ್ತು ಟೊಯೊಟಾ ಗ್ಲ್ಯಾನ್ಜಾಗೆ ನೇರ ಪ್ರತಿಸ್ಪರ್ಧಿಯಾಗಿರುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ ಮಾರಾಟ ವಿವರವನ್ನು ನೋಡುವುದಾದರೆ, ಕಂಪನಿಯು ಕಳೆದ ತಿಂಗಳು 19,630 ಯುನಿಟ್‌ ಮಾದರಿಗಳನ್ನು ಮಾರಿದ್ದು, ಹೋದ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ (16,357) ವರ್ಷದಿಂದ ವರ್ಷಕ್ಕೆ ಶೇಕಡ 20% ಬೆಳವಣಿಗೆ ಸಾಧಿಸಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಕುರಿತು ಮಾತನಾಡುವುದಾದರೆ, ಇದು ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಒಳಗೊಂಡಂತೆ ವಿವಿಧ ರೂಪಾಂತರ, ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ.

Maruti Suzuki Baleno, Fronx Car Sales In January 33,000 Unit: 6 Lakh Staring Price

ಈ ಫ್ರಾಂಕ್ಸ್ ಕಾರು, 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.1 ಕೆಎಂಪಿಎಲ್ - 22.89 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 28.51 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕ್ರೂಸ್ ಕಂಟ್ರೋಲ್ ಆಟೋ ಕ್ಲೈಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾ, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.

Maruti Suzuki Baleno, Fronx Car Sales In January 33,000 Unit: 6 Lakh Staring Price

ಮಾರುತಿ ಸುಜುಕಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್, ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಪಾ ರೂಪಾಂತರ ಮತ್ತು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಸೇರಿದಂತೆ 7 ಮೊನೊಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ.

ಬಲೆನೊ ಕಾರು, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಜೊತೆಗೆ ಐಡಲ್-ಸ್ಟಾರ್ಟ್/ಸ್ಟಾಪ್ ತಂತ್ರಜ್ಞಾನವನ್ನು ಪಡೆಡಿದ್ದು, ಪೆಟ್ರೋಲ್ ರೂಪಾಂತರಗಳು 22.35 - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಈ ಬಲೆನೊ, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4 ಸ್ಪೀಕರ್‌, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಒಳಗೊಂಡಿದೆ.

Article Published On: Wednesday, February 14, 2024, 14:58 [IST]
English summary
Maruti suzuki baleno fronx car sales in january 33000 unit 6 lakh staring price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+