Baleno ಮಾರುತಿ ಸುಜುಕಿ ಬಲೆನೊಗೆ ರೂ.57,000 ರಿಯಾಯಿತಿ, ರೂ.6 ಲಕ್ಷ ದರ.. 30 ಕಿಲೋಮೀಟರ್ ಮೈಲೇಜ್
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಜನರು ಕೂಡ ಇಷ್ಟಪಟ್ಟು ಖರೀದಿಸುತ್ತಾರೆ. ಈ ಮಾರ್ಚ್‌ನಲ್ಲಿಯೂ ಹೆಚ್ಚಿನ ಸಂಖ್ಯೆಯ ಗ್ರಾಹಕರನ್ನು ಸೆಳೆಯಲು ಬಲೆನೊ ಕಾರಿನ ಮೇಲೆ ಭಾರೀ ರಿಯಾಯಿತಿಯನ್ನು ನೀಡಲಾಗಿದೆ. ಆ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಈ ಮಾರುತಿ ಸುಜುಕಿ ಬಲೆನೊ ಒಟ್ಟು ರೂ.57,000 ಡಿಸ್ಕೌಂಟ್ ಆಫರ್ ಪಡೆದಿದೆ. ಅದರಲ್ಲಿ ರೂ.35,000 ನಗದು ರಿಯಾಯಿತಿ (Cash Discount), ರೂ.15,000 ವಿನಿಮಯ ಬೋನಸ್ (Exchange Bonus) ಮತ್ತು ರೂ.7,000 ಕಾರ್ಪೊರೇಟ್ ರಿಯಾಯಿತಿ (Corporate Discount) ಸೇರಿದೆ. ಪ್ರಸ್ತುತ ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳ್ಳುವ ಬಲೆನೊ, ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ.

ದೇಶೀಯ ಮಾರುಕಟ್ಟೆಯಲ್ಲಿ ಬಲೆನೊ ಕಾರು ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ (Variant) ಮತ್ತು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಈ ಕಾರಿನ ವಿನ್ಯಾಸವು ಅತ್ಯಾಧುನಿಕವಾಗಿದ್ದು, ನೋಡಿದ ಕೂಡಲೇ ಪ್ರತಿಯೊಬ್ಬರನ್ನು ಸೆಳೆಯುತ್ತದೆ. ಜೊತೆಗೆ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದಾಗಿದೆ.
ಈ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್, 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಹಾಗೂ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 22.35 ರಿಂದ 22.94 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿ 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಬಲೆನೊ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿಯನ್ನು ಹೊಂದಿದೆ. ಹಾಗೆಯೇ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಸುರಕ್ಷತೆಯ ವಿಚಾರದಲ್ಲಿಯೂ ಅತ್ಯುತ್ತಮವಾಗಿದೆ. 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, 3-ಪಾಯಿಂಟ್ ಸೀಟ್‌ಬೆಲ್ಟ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಈ ಕಾರಿಗೆ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್, ಸಿಟ್ರಸ್ ಸಿ3, ಟೊಯೊಟಾ ಗ್ಲಾನ್ಜಾ ಪ್ರಬಲ ಎದುರಾಳಿಯಾಗಿವೆ. ಗಮನಿಸಿ... ಈ ಡಿಸ್ಕೌಂಟ್ ಆಫರ್ ಪ್ರಯೋಜನಗಳು ನಗರದಿಂದ ನಗರಕ್ಕೆ ಡೀಲರ್‌ಶಿಪ್, ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆ - ಬೇರೆಯಿರಲಿದ್ದು ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ಸದ್ಯ ಬಲೆನೊ ಹ್ಯಾಚ್‌ಬ್ಯಾಕ್ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಈ ರಿಯಾಯಿತಿಯಿಂದ ಇನ್ನಷ್ಟು ಮಂದಿ ಖರೀದಿಸಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications