ಬೆಸ್ಟ್ 5-ಸೀಟರ್ ಕಾರು: 30 ಕಿ.ಮೀ ಮೈಲೇಜ್ ನೀಡುವ ಕಾರಿಗೆ ಗ್ರಾಹಕರಿಂದ ನಿರೀಕ್ಷಿಸದ ಟ್ವಿಸ್ಟ್!
ಭಾರತದಾದ್ಯಂತ ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಗಮನಾರ್ಹ ಕುಸಿತವನ್ನು ಕಂಡಿದೆ. ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಸ್‍ಯುವಿ ಮಾದರಿಗಳಿಗೆ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿದೆ. ಪ್ರಮುಖ ತಯಾರಕರಾದ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಹ್ಯುಂಡೈ ನಂತಹ ಹಲವಾರು ಪ್ರಮುಖ ತಯಾರಕರ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಈ ನಡುವೆ 2024ರ ಸೆಪ್ಟೆಂಬರ್ ತಿಂಗಳ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕಾರು ಮಾರಾಟ ವರದಿ ಬಹಿರಂಗವಾಗಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಬಲೆನೊ ಮಾದರಿಯ 14,292 ಯುನಿಟ್ ಗಳು ಮಾರಾಟವಾಗಿವೆ.
2023ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಮಾದರಿಯ 18,417 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.22 ರಷ್ಟು ಕುಸಿತವನ್ನು ಕಂಡಿದೆ. ಈ ಮಾರುತಿ ಸುಜುಕಿ ಬಲೆನೊ ಕಾರಿನ ವಿನ್ಯಾಸದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು, 5 ಜನರು ಆರಾಮದಾಯವಾಗಿ ಪ್ರಯಾಣಿಸಬಹುದು. ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿರುವುದರಿಂದ ನೆಕ್ಸಾ ಡೀಲರ್ ಮೂಲಕ ಮಾರಾಟಗೊಳಿಸಲಾಗುತ್ತದೆ.

ಈ ಮಾರುತಿ ಸುಜುಕಿ ಬಲೆನೊ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ಫೀಚರ್ಸ್ ಗಳನ್ನು ಒಳಗೊಂಡಿವೆ. ಪ್ರಮುಖವಾಗಿ ಐಡಲ್ ಸ್ಟಾರ್ಟ್/ ಸ್ಟಾಪ್ ತಂತ್ರಜ್ಞಾನವನ್ನು ಹೊಂದಿದೆ. ಇದರೊಟ್ಟಿಗೆ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಯಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4-ಸ್ಪೀಕರ್‌ಗಳನ್ನು ಒಳಗೊಂಡ ಸೌಂಡ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿಯನ್ನು ಪಡೆದಿದೆ.
ಮಾರುತಿ ಸುಜುಕಿ ಬಲೆನೊ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 90 PS ಗರಿಷ್ಠ ಪವರ್, 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಸಿಎನ್‌ಜಿ ಚಾಲಿತ ಬಲೆನೊ ಸಹ ಈ ರೀತಿಯ ಪವರ್‌ಟ್ರೇನ್ ಅನ್ನು ಪಡೆದಿದೆ. ಆದರೆ, 77.49 PS ಪವರ್, 98.5 Nm ಪೀಕ್ ಟಾರ್ಕ್ ಹೊರಕಾಕುತ್ತದೆ. ಕೇವಲ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಇಂಧನ ದಕ್ಷತೆ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ರೂಪಾಂತರಗಳು 22.35 kmpl - 22.94 kmpl, ಸಿಎನ್‌ಜಿ ರೂಪಾಂತರಗಳು 30.61 km/kg ಮೈಲೇಜ್ ನೀಡುತ್ತವೆ.
ಈ ಕಾರು ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ ಹಾಗೂ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರೈಂಡರ್ ಗ್ರೇ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಹ್ಯಾಚ್‌ಬ್ಯಾಕ್ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ISOFIX ಆಂಕಾರೇಜ್, ರೇರ್ ಪಾರ್ಕಿಂಗ್ ಸೇನಾರ್ಸ್, 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ದೇಶದ ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಮಾರುತಿ ಸುಜುಕಿ ಕಂಪನಿಯು ಆಲ್ಟೊ ಕೆ10, ಸೆಲರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬ್ರೆಝಾ, ಎರ್ಟಿಗಾ, ಡಿಜೈರ್, ಫ್ರಾಂಕ್ಸ್ ಹಾಗೂ ಜಿಮ್ನಿ ಸೇರಿದಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications