Maruti Suzuki: 28.51 Km ಮೈಲೇಜ್.. 5 ಸೀಟರ್, ಎಲ್ಲರಿಗೂ ಈ ಕಾರುಗಳೇ ಬೇಕು.. ದಾಖಲೆ ಸಂಖ್ಯೆಯಲ್ಲಿ ಮಾರಾಟ!
ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ನವೆಂಬರ್‌ನಲ್ಲಿ ಕಂಪನಿ ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಟಾಪ್ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿಯ 6 ಹ್ಯಾಚ್‌ಬ್ಯಾಕ್, ಎಂವಿಪಿ ಮತ್ತು ಎಸ್‌ಯುವಿಗಳು ಸ್ಥಾನ ಪಡಿಸಿವೆ. ಅದರಲ್ಲೂ ಜನಪ್ರಿಯ ಬ್ರೆಝಾ (Brezza) ಹಾಗೂ ಫ್ರಾಂಕ್ಸ್ (Fronx) ಎಸ್‌ಯುವಿಗಳು ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಪ್ರಖ್ಯಾತ ಎಸ್‌ಯುವಿ ಆಗಿದ್ದು, ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಕಳೆದ ತಿಂಗಳು (ನವೆಂಬರ್ - 2024) 14,918 ಯುನಿಟ್ ಬ್ರೆಝಾ ಕಾರುಗಳು ಮಾರಾಟಗೊಂಡಿವೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 13,393 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 11% ಬೆಳವಣಿಗೆ ಸಾಧಿಸಲಾಗಿದೆ.

ಈ ಮಾರುತಿ ಬ್ರೆಝಾ ಕಾರು ಕನಿಷ್ಠ ರೂ.8.34 ಲಕ್ಷ ಮತ್ತು ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಜೊತೆಗೆ 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ಬ್ರೆಝಾ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), 6-ಸ್ಪೀಕರ್‌ಗಳು, ಪ್ಯಾಡಲ್ ಶಿಫ್ಟರ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಎಸಿ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಕೂಡ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಹೋದ ತಿಂಗಳು 14,882 ಯುನಿಟ್ ಫ್ರಾಂಕ್ಸ್ ಕಾರುಗಳನ್ನು ಮಾರಲಾಗಿದೆ. 2023ರ ನವೆಂಬರ್‌ನಲ್ಲಿ ಮಾರಾಟಗೊಳಿಸಿದ 9,867 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 51% ಪ್ರಗತಿಯಾಗಿದೆ.
ಈ ಮಾರುತಿ ಫ್ರಾಂಕ್ಸ್ ಎಸ್‌ಯುವಿ, ಕನಿಷ್ಠ ರೂ.7.51 ಲಕ್ಷ ಮತ್ತು ಗರಿಷ್ಠ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು.
ಹೊಚ್ಚ ಹೊಸ ಫ್ರಾಂಕ್ಸ್ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications