Maruti Suzuki: ಈ 5-ಸೀಟರ್ ಕಾರುಗಳಿಗೆ ಫುಲ್ ಡಿಮ್ಯಾಂಡ್.. ದಾಖಲೆ ಸಂಖ್ಯೆಯಲ್ಲಿ ಮಾರಾಟ, 5.54 ಲಕ್ಷದಿಂದ ಶುರು!

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited - MSIL), ಕೈಗೆಟುಕುವ ಬೆಲೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಹಾಗೂ ಪ್ರಮುಖ ವಾಹನ ತಯಾರಕ ಕಂಪನಿಗಳು, 2024ರ ಜನವರಿಯಿಂದ ಆಗಸ್ಟ್ ತಿಂಗಳವರೆಗಿನ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದವು. ಈ ಅವಧಿಯಲ್ಲಿ ಮಾರುತಿ ಸುಜುಕಿಗೆ ಸೇರಿದ ಬ್ರೆಝಾ ಹಾಗೂ ವ್ಯಾಗನ್ಆರ್ ಕಾರುಗಳು ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಜನಪ್ರಿಯ ಎಸ್‌ಯುವಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಭಾರಿ ಬೇಡಿಕೆಯನ್ನು ಪಡೆದುಕೊಂಡಿದೆ. ಈ ವರ್ಷದ ಮೊದಲರ್ಧದಲ್ಲಿ (ಜನವರಿ - ಆಗಸ್ಟ್ 2024) 124,019 ಯುನಿಟ್‌ನ್ನು ಮಾರಾಟ ಮಾಡಲಾಗಿದೆ. ಇದೇ ಅವಧಿಯಲ್ಲಿ ವೈದ್ಯರು, ಎಂಜಿನಿಯರ್ ಹಾಗೂ ಎಲ್ಲ ವರ್ಗದವರ ನೆಚ್ಚಿನ ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್‌ನ 132,309 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Maruti Suzuki Brezza and WagonR cars January to August 2024 sales report

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಚ್ಚ ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ, ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರಿನಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಮಾರುತಿ ಸುಜುಕಿ ಬ್ರೆಝಾ ಕಾರು ಶಕ್ತಿಯುತವಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ನೀಡುತ್ತದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ.

Maruti Suzuki Brezza and WagonR cars January to August 2024 sales report

ನೂತನ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್,ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್, ಸನ್‌ರೂಫ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ ಬಗ್ಗೆ ಹೇಳುವುದಾದರೆ, ಈ ಕಾರು 5.54 ಲಕ್ಷದಿಂದ ರೂ.7.32 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಈ ವ್ಯಾಗನ್ಆರ್ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋನಂತಹ ಹಲವು ವೈಶಿಷ್ಟ್ಯಗಳು ಇದರಲ್ಲಿವೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, September 28, 2024, 9:00 [IST]
English summary
Maruti suzuki brezza and wagonr cars january to august 2024 sales report details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+