Maruti Suzuki: ಈ ಪ್ರಮುಖ ಕಾರಿಗೆ ಮನಸೋತ ಗ್ರಾಹಕರು.. ರೂ.8.34 ಲಕ್ಷ ಬೆಲೆ, 25 ಕಿ.ಮೀ ಮೈಲೇಜ್.. 5 ಸೀಟರ್!
ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ, ಸೆಲೆರಿಯೊ, ಬಲೆನೊ, ವ್ಯಾಗನ್ಆರ್, ಇಗ್ನಿಸ್, ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಬ್ರೆಝಾ (Brezza) ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಇತ್ತೀಚೆಗೆ, ಜುಲೈ (2024) ತಿಂಗಳ ಕಾರು ಮಾರಾಟದ ಅಂಕಿಅಂಶ ಪ್ರಕಟಗೊಂಡಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಬ್ರೆಝಾ ಎಸ್‌ಯುವಿಯೂ ಇದ್ದು, 6ನೇ ಸ್ಥಾನದಲ್ಲಿದೆ.
ಕಳೆದ ತಿಂಗಳು (ಜುಲೈ 2024) 14,676 ಯುನಿಟ್ ಮಾರುತಿ ಸುಜುಕಿ ಬ್ರೆಝಾ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಿದ 16,543 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಮಾರಾಟ ಪ್ರಮಾಣ ಕೊಂಚ ಮಟ್ಟಿಗೆ ಕುಸಿತವಾಗಿದ್ದು, ಶೇಕಡ 11% ಇಳಿಕೆಯಾಗಿದೆ. ಆದಾಗ್ಯೂ ಬ್ರೆಝಾ ಕಾರಿಗೆ ಮಾರಾಟ ಕಡಿಮೆಯಾಗಿರುವ ಬಗ್ಗೆ ಕಂಪನಿಯು ಯಾವುದೇ ನಿರ್ದಿಷ್ಟ ಕಾರಣವನ್ನು ಬಹಿರಂಗಪಡಿಸಿಲ್ಲ. ಈ ಆಗಸ್ಟ್ ತಿಂಗಳಲ್ಲಿ ಮಾರಾಟವು ಸುಧಾರಿಸುವ ನಿರೀಕ್ಷೆಯಿದೆ.

ಸದ್ಯ, ದೇಶೀಯವಾಗಿ ಖರೀದಿಗೆ ಲಭ್ಯವಾಗುವ ಹೊಚ್ಚ ಹೊಸ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿ ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ,ಝಡ್ಎಕ್ಸ್ಐ ಒಳಗೊಂಡಂತೆ ಹಲವು ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ. ಜೊತೆಗೆ ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್ನೈಟ್ ಬ್ಲಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 17.38 ರಿಂದ 19.89 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 25.51 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.

ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಯು ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6-ಸ್ಪೀಕರ್ ಸೆಟಪ್, ಪ್ಯಾಡಲ್ ಶಿಫ್ಟರ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋಮೆಟಿಕ್ ಎಸಿಯಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಬ್ರೆಝಾ ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸುತ್ತದೆ. 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಟಾಟಾ ನೆಕ್ಸಾನ್ ಮತ್ತು ಹ್ಯುಂಡೈ ವೆನ್ಯೂಗಳು ಪ್ರಬಲವಾದ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications