ಟಾಟಾ ನೆಕ್ಸಾನ್‌ಗಿಂತ ಮುಂದಿದೆ ಈ ಜನಪ್ರಿಯ ಮಾರುತಿ ಕಾರು.. ರೂ.8 ಲಕ್ಷ ಬೆಲೆ, 25 ಕಿ.ಮೀ ಮೈಲೇಜ್
ಟಾಟಾ ನೆಕ್ಸಾನ್ ಪ್ರಖ್ಯಾತ ಎಸ್‌ಯುವಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. 2022, 2023 ಹಾಗೂ 2024ರ ಆರ್ಥಿಕ ವರ್ಷದಲ್ಲಿ ಕ್ರಮವಾಗಿ 124,130, 172,139 ಮತ್ತು 171,697 ಯುನಿಟ್ ನೆಕ್ಸಾನ್ ಕಾರುಗಳನ್ನು ಮಾರಲಾಗಿದೆ. ಆದಾಗ್ಯೂ 2025ರ ಆರ್ಥಿಕ ವರ್ಷದ (FY25) ಮೊದಲ ತ್ರೈಮಾಸಿಕದಲ್ಲಿ, ಮಾರುತಿ ಸುಜುಕಿ ಬ್ರೆಝಾ ಕಾರಿನ ತೀವ್ರ ಸ್ಪರ್ಧೆಯಿಂದ ನೆಕ್ಸಾನ್ ಮಾರಾಟ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿತವಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಸದ್ಯ ಟಾಟಾ ನೆಕ್ಸಾನ್‌ಗಿಂತ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. 2025ರ ಆರ್ಥಿಕ ವರ್ಷದ ಏಪ್ರಿಲ್‌ನಲ್ಲಿ 17,113, ಮೇನಲ್ಲಿ 14,186 ಹಾಗೂ ಜೂನ್‌ನಲ್ಲಿ 13,172 ಯುನಿಟ್ ಬ್ರೆಝಾ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿದ್ದು, ಮೂರು ತಿಂಗಳಲ್ಲಿ ಈ ಸಂಖ್ಯೆ 44,471 ಯುನಿಟ್‌ಗಳಿಗೆ ತಲುಪಿದೆ.

ಟಾಟಾ ನೆಕ್ಸಾನ್ (Tata Nexon) ಮಾರಾಟದ ಅಂಕಿಅಂಶಗಳನ್ನು ನೋಡುವುದಾದರೆ, ಈ ಆರ್ಥಿಕ ವರ್ಷದ ಏಪ್ರಿಲ್‌ನಲ್ಲಿ 11,168, ಮೇನಲ್ಲಿ 11,457 ಮತ್ತು ಜೂನ್‌ನಲ್ಲಿ 12,066 ಯುನಿಟ್ ಕಾರುಗಳನ್ನು ಮಾರಲಾಗಿದೆ. ಒಟ್ಟು ಸಂಖ್ಯೆ 34,691 ಯುನಿಟ್‌ಗೆ ಬಂದು ನಿಂತಿದೆ. ದೇಶೀಯವಾಗಿ ಲಭ್ಯವಿರುವ ನೆಕ್ಸಾನ್ ಎಸ್‌ಯುವಿ ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.01 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) ಕೂಡ ಖರೀದಿಗೆ ಲಭ್ಯವಿದ್ದು, ರೂ.14.49 ಲಕ್ಷದಿಂದ ರೂ.19.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 30 ಹಾಗೂ 40.5 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 325 ಕಿ.ಮೀ ರಿಂದ 465 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯು ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ,ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳನ್ನು ಪಡೆದಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಬ್ರೆಝಾ ಕಾರು FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಜನರು ಆರಾಮದಾಯಕವಾಗಿ ಸಂಚರಿಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6-ಸ್ಪೀಕರ್ ಸೆಟಪ್, ಪ್ಯಾಡಲ್ ಶಿಫ್ಟರ್ಸ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications