Maruti Suzuki: ಈ ಜನಪ್ರಿಯ ಕಾರನ್ನು ಮೆಚ್ಚಿದ ಗ್ರಾಹಕರು.. ಭಾರಿ ಬೇಡಿಕೆ, 8 ಲಕ್ಷ ಬೆಲೆ.. 25 Km ಮೈಲೇಜ್.. 5 ಸೀಟರ್!
ಭಾರತದ ನಂಬರ್ 1 ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಇಗ್ನಿಸ್, ಬಲೆನೊ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಹಾಗೂ ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳೊಂದಿಗೆ ಬ್ರೆಝಾ (Brezza) ಕೂಡ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಭಾರಿ ಬೇಡಿಕೆ ಪಡೆದುಕೊಂಡಿದೆ. ಕಾಯುವಿಕೆ ಅವಧಿಯೂ ಸ್ವಲ್ಪ ಹೆಚ್ಚಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ಕಾಯುವಿಕೆ ಅವಧಿ (Waiting Period) 42 ರಿಂದ 238 ದಿನಗಳಿದೆ. ಜುಲೈ (2024) ತಿಂಗಳು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರುಗಳ ಪಟ್ಟಿಯಲ್ಲಿಯೂ ಬ್ರೆಝಾ ಇದ್ದು, 6ನೇ ಸ್ಥಾನದಲ್ಲಿದೆ. ಒಟ್ಟು 14,676 ಯುನಿಟ್ ಮಾರಾಟ ಮಾಡಲಾಗಿದೆ.

ಪ್ರಸ್ತುತ, ನೂತನ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ ರೂ.8.34 ರಿಂದ ರೂ.14.14 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳನ್ನು ಹೊಂದಿದೆ. ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ನೈಟ್ ಬ್ಲಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ (ಕಲರ್) ಲಭ್ಯವಿದೆ.
ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದಾಗ್ಯೂ 88 ಪಿಎಸ್ ಶಕ್ತಿ ಮತ್ತು 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.

ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯು ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್, ಸನ್‌ರೂಫ್, ಕ್ರೂಸ್ ಕಂಟ್ರೋಲ್ ಮತ್ತು ಆಟೋಮೆಟಿಕ್ ಎಸಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ

ಬ್ರೆಝಾ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಸೀಟ್ ಬೆಲ್ಟ್ ರಿಮೈಂಡರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಟಾಟಾ ನೆಕ್ಸಾನ್ ಹಾಗೂ ಹ್ಯುಂಡೈ ವೆನ್ಯೂಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ನಿಮ್ಮ ಗಮನಕ್ಕೆ.. ಈ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ ಕಾಯುವಿಕೆ ಅವಧಿ ರೂಪಾಂತರಗಳನ್ನು ಅವಲಂಭಿಸಿ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications