Maruti Suzuki: ಈ ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟ.. ಬೈಕ್‌ನಂತೆ 25 ಕಿ.ಮೀ ಮೈಲೇಜ್, 8 ಲಕ್ಷ ಬೆಲೆ

ದೇಶದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿ ಗಳಿಸಿದೆ. ಕಂಪನಿಯ ಕಾರುಗಳು ಆಕರ್ಷಕ ವಿನ್ಯಾಸ, ವೈಶಿಷ್ಟ್ಯ ಹಾಗೂ ಕೈಗೆಟುಕುವ ಬೆಲೆಯನ್ನು ಪಡೆದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಕಳೆದ ವರ್ಷ (2023) ಈ ಒಂದು ಮಾದರಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ.

ನಾವು ಹೇಳಲು ಹೊರಟಿರುವುದು ಪ್ರಮುಖ ಎಸ್‌ಯುವಿ ಬ್ರೆಝಾ (Brezza) ಕುರಿತು.. ಈ ಕಾರು ಉತ್ತಮವಾಗಿ ಮಾರಾಟಗೊಳ್ಳುವ ಮೂಲಕ ಮತ್ತೆ ಮತ್ತೆ ಗ್ರಾಹಕರ ಮನಸ್ಸನ್ನು ಗೆಲ್ಲುತ್ತಿದೆ. ಹೋದ ವರ್ಷ ಮಾರುತಿ ಸುಜುಕಿ, ಸೇಲ್ ಮಾಡಿದ ಕಾರುಗಳಲ್ಲಿ ಬ್ರೆಝಾ ಎಸ್‌ಯುವಿ ಮೊದಲ ಸ್ಥಾನದಲ್ಲಿ ನಿಂತಿದ್ದು, ಒಟ್ಟು 1.70 ಲಕ್ಷ ಯುನಿಟ್ ಮಾರಾಟ ಮಾಡುವ ಮೂಲಕ ಹೊಸದೊಂದು ದಾಖಲೆ ಬರೆದಿದೆ.

Maruti Suzuki: ಈ ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟ.. ಬೈಕ್‌ನಂತೆ 25 ಕಿ.ಮೀ ಮೈಲೇಜ್, 8 ಲಕ್ಷ ಬೆಲೆ

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza), ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ 4 ರೂಪಾಂತರ, ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಎಕ್ಸುಬರಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ 6 ಮೊನೊಟೋನ್, 3 ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

5- ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಎಸ್‌ಯುವಿ, 1.5 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 103 PS ಗರಿಷ್ಠ ಪವರ್, 137 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 5 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

Maruti Suzuki: ಈ ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟ.. ಬೈಕ್‌ನಂತೆ 25 ಕಿ.ಮೀ ಮೈಲೇಜ್, 8 ಲಕ್ಷ ಬೆಲೆ

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಆದರೆ, 88 PS ಪವರ್, 121.5 Nm ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಜೊತೆಯಲ್ಲಿ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17.38 kmpl - 19.8 kmpl, ಸಿಎನ್‌ಜಿ ರೂಪಾಂತರಗಳು 25.51 km/kg ಮೈಲೇಜ್ ನೀಡುತ್ತವೆ.

ಮಾರುತಿ ಸುಜುಕಿ ಬ್ರೆಝಾ ವಿನ್ಯಾಸದ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್‌, ಸಿಂಗಲ್-ಪೇನ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಹೆಡ್ಸ್-ಅಪ್ ಡಿಸ್ಪ್ಲೇ ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki: ಈ ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟ.. ಬೈಕ್‌ನಂತೆ 25 ಕಿ.ಮೀ ಮೈಲೇಜ್, 8 ಲಕ್ಷ ಬೆಲೆ

ಸುರಕ್ಷತೆಯ ವಿಚಾರದಲ್ಲಿ ಬ್ರೆಝಾ ಉತ್ತಮ ವೈಶಿಷ್ಟ್ಯಗಳನ್ನು ಪಡೆದಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಂತೆ ವಿವಿಧ ಫೀಚರ್ಸ್ ಇವೆ. ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಮಾರುತಿ ಸುಜುಕಿ ಸೋಮವಾರ ಡಿಸೆಂಬರ್ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದ್ದು, ಒಟ್ಟು 1,37,551 ಯುನಿಟ್ ವಾಹನಗಳನ್ನು ಮಾರಾಟಗೊಳಿಸಿದ್ದು, 2022ರ ಇದೇ ಅವಧಿಗೆ ಹೋಲಿಕೆ ಮಾಡಿದರೆ (1,39,347 ಯುನಿಟ್‌) ವರ್ಷದಿಂದ ವರ್ಷಕ್ಕೆ (Y-O-Y) ಶೇಕಡ 1.28% ಕುಸಿತ ಕಂಡಿದೆ. ಯುಟಿಲಿಟಿ ವೆಹಿಕಲ್‌ಗಳಾದ ಎರ್ಟಿಗಾ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ, ಸೇಲ್‌ನಲ್ಲಿ ಭರ್ಜರಿ ಲಾಭವನ್ನು ಮಾಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 2, 2024, 11:24 [IST]
English summary
Maruti suzuki brezza highest selling suv in 2023 25 km mileage 8 lakh price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+