Maruti Suzuki Brezza: ಹೊಸ ಕಾರು ತೆಗೆದುಕೊಳ್ಳುವವರಿಗೆ ಬ್ರೆಝಾ ಉತ್ತಮವೇ?, 25 ಕಿ.ಮೀ ಮೈಲೇಜ್, 8 ಲಕ್ಷ ಬೆಲೆ
ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬುದು ದೊಡ್ಡ ಆಸೆಯಾಗಿರುತ್ತದೆ. ಆದರೆ, ಬೆಲೆ, ಮೈಲೇಜ್ ವಿಚಾರದಲ್ಲಿ ಹೆಚ್ಚಿನ ಗೊಂದಲವಿರುತ್ತದೆ. ಅಂತಹವರಿಗೆ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಉತ್ತಮ ಆಯ್ಕೆಯಾಗಬಹುದು. ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಈ ಕಾರು, ಮಧ್ಯಮ ವರ್ಗದ ಜನರಿಗೆ ಹೆಚ್ಚು ಸೂಕ್ತವೆಂಬುದು ಪರಿಣಿತರ ಲೆಕ್ಕಾಚಾರ.
ಇತ್ತಿಚಿನ ದಿನಗಳಲ್ಲಿಈ ಮಾರುತಿ ಸುಜುಕಿ ಬ್ರೆಝಾ ಮೊದಲ ಬಾರಿಗೆ ನೂತನ ಕಾರು ತೆಗೆದುಕೊಳ್ಳುವವರ ಜನಪ್ರಿಯ ಆಯ್ಕೆಯಾಗಿದೆ. ಇದು ಕೈಗೆಟುಕುವ ಬೆಲೆ,ಆಕರ್ಷಕ ವೈಶಿಷ್ಟ್ಯವನ್ನು ಹೊಂದಿದೆ. ಜೊತೆಗೆ ಉತ್ತಮವಾಗಿ ಮೈಲೇಜ್ ನೀಡಲಿದ್ದು, ಇಂಧನ ವೆಚ್ಚವು ಕಡಿಮೆಯಾಗುತ್ತದೆ. ಚಾಲಕನಿಗೆ ಸಹಕಾರಿಯಾಗಿರುವ ಫಿಚರ್ಸ್ ಒಳಗೊಂಡಿದ್ದು, ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತದೆ. ಇದರಿಂದಾಗಿ ಬ್ರೆಝಾವನ್ನು ಬಹುತೇಕರು ತಮ್ಮ ನೆಚ್ಚಿನ ವಾಹನವಾಗಿ ಆಯ್ಕೆ ಮಾಡುತ್ತಿದ್ದಾರೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ಆಕರ್ಷಕ ರೂಪಾಂತರಗಳು, ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಪರ್ಲ್ ಮಿಡ್ನೈಟ್ ಬ್ಲಾಕ್, ಮ್ಯಾಗ್ಮಾ ಗ್ರೇ, ಒಳಗೊಂಡಂತೆ 7 - ಮೊನೊಟೋನ್, 3 - ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಈ ಕಾರಿನಲ್ಲಿ 5 ಮಂದಿ ಆರಾಮದಾಯವಾಗಿ ಕುಳಿತುಕೊಂಡು ಪ್ರಯಾಣಿಸಬಹುದಾಗಿದ್ದು, ಗ್ರಾಹಕರನ್ನು ಸೆಳೆಯುವ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. 328 ಸಾಮರ್ಥ್ಯದ ಬೂಟ್ ಸ್ಪೇಸ್ ಪಡೆದಿದ್ದು, 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಬ್ರೆಝಾ ಪೆಟ್ರೋಲ್ (Petrol) ಮತ್ತು ಸಿಎನ್‌ಜಿ (Cng) ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ.

ಇದರ 1.5 - ಲೀಟರ್ ಪೆಟ್ರೋಲ್ (Petrol) ಎಂಜಿನ್ 103 PS ಗರಿಷ್ಠ ಪವರ್, 137 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5 -ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.
ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಪಡೆದಿದೆ. ಆದರೆ, 88 PS ಪವರ್, 121.5 Nm ಪೀಕ್ ಹೊರಹಾಕುತ್ತದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 17.38 kmpl - 19.8 kmpl, ಸಿಎನ್‌ಜಿ ರೂಪಾಂತರಗಳು 25.51 km/kg ಮೈಲೇಜ್ ನೀಡುತ್ತವೆ.
ಮಾರುತಿ ಸುಜುಕಿ ಬ್ರೆಝಾ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4 - ಸ್ಪೀಕರ್ ಸೌಂಡ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್, ಸಿಂಗಲ್ - ಪೇನ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಹೆಡ್ಸ್ - ಅಪ್ ಡಿಸ್ಪ್ಲೇ, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ - ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications