Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್‌ಯುವಿಯಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಇಲ್ಲಿ ಬ್ರೆಝಾ ಕಾರಿನ ಆನ್ ರೋಡ್ (On Road) ಬೆಲೆ ಹಾಗೂ ಇಎಂಐ (EMI) ಆಯ್ಕೆ ಕುರಿತು ತಿಳಿಸಿಕೊಟ್ಟಿದ್ದೇವೆ.
ದೇಶೀಯ ಮಾರುಕಟ್ಟೆಯಲ್ಲಿ ಏಪ್ರಿಲ್ 1, 2023 ರಿಂದ ಫೆಬ್ರವರಿ 2024 ರವರೆಗಿನ ಆರ್ಥಿಕ ವರ್ಷದಲ್ಲಿ 155,283 ಯುನಿಟ್ ಬ್ರೆಝಾ ಎಸ್‌ಯುವಿ ಮಾರಾಟವಾಗಿದ್ದವು. ಈ ಅಂಶವೇ ಬ್ರೆಝಾ ಕಾರಿನ ಖ್ಯಾತಿ ಬಗ್ಗೆ ಬೆಳಕನ್ನು ಚೆಲ್ಲುತ್ತದೆ. ಬೆಂಗಳೂರಿನಲ್ಲಿ ಬೇಸ್ ಮಾಡೆಲ್ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ ರೂ.9.95 ಲಕ್ಷ, ಎಲ್ಎಕ್ಸ್ಐ ಸಿಎನ್‌ಜಿ ಮಾದರಿ ರೂ.11.07 ಲಕ್ಷ ಆನ್ ರೋಡ್ ಬೆಲೆಯನ್ನು ಹೊಂದಿದೆ.

ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಝಡ್ಎಕ್ಸ್ಐ (ಸಿಎನ್‌ಜಿ) ಆವೃತ್ತಿ ರೂ.14.89 ಲಕ್ಷ, ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ಮಾದರಿ ರೂ.15.48 ಲಕ್ಷ ಆನ್ ರೋಡ್ ದರವನ್ನು ಪಡೆದಿದೆ. ನೀವು ಈ ಕಾರನ್ನು ರೂ.99,000 ಡೌನ್ ಪೇಮೆಂಟ್ ಮಾಡಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇಕಡ 9.8% ಬಡ್ಡಿ ದರದಲ್ಲಿ ತಿಂಗಳಿಗೆ ರೂ.18,945 ಇಎಂಐ ಕಟ್ಟಬೇಕು.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಪರ್ಲ್ ಮಿಡ್ನೈಟ್ ಬ್ಲಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದ್ದು, FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ಈ ಕಾರು ಎರಡು ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 103 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 88 ಪಿಎಸ್ ಪವರ್ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೂ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17.38 ರಿಂದ 19.89 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 25.51 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ಮಾರುತಿ ಸುಜುಕಿ ಬ್ರೆಝಾ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್ಸ್, ಸಿಂಗಲ್ ಪೇನ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್, 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಈ ಕಾರಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಹುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಆನ್ ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications