ಎಲ್ಲರ ಗಮನ ಸೆಳೆಯುತ್ತಿದೆ ಮಾರುತಿಯ ಈ ಕಾರು: ಕ್ರೇಟಾಗಿಂತ 3 ಲಕ್ಷ ರೂ ಕಡಿಮೆಗೆ ಈ SUV ಮನೆಗೆ ತನ್ನಿ
ಭಾರತದ ಪ್ರಖ್ಯಾತ ಕಾರು ನಿರ್ಮಾಣ ಕಂಪನಿಯಾದ ಮಾರುತಿ ಸುಜಕಿ ಸಾಧಾರಣವಾಗಿ ಎಲ್ಲಾ ರೀತಿಯ ಕಾರುಗಳನ್ನೂ ಮಾರುಕಟ್ಟೆಗೆ ಬೊಟ್ಟಿದೆ. ಗ್ರಾಹಕರು ಅವರವರಿಗೆ ಬೇಕಾದ ಕಾರುಗಳನ್ನು ಆಯ್ಕೆ ಮಾಡಿಕೊಂಡು ಖರೀದಿ ಮಾಡುತ್ತಾರೆ. ಮಾರುತಿಯ ಕಾರುಗಳಲ್ಲಿ ಎಸ್‌ಯುವಿಗಳೂ ಇದೆ. ಅಧಿಕ ಮೈಲೇಜ್ ಮತ್ತು ಉತ್ತಮ ಪರ್ಫಾಮೆನ್ಸ್ ಕೊಡುವ ಎಸ್‌ಯುವಿಗಳಲ್ಲಿ ಮಾರುತಿ ಸುಜುಕಿ ಬ್ರೆಝಾ ಪ್ರಮುಖವಾದುದು. ಇಂದಿನ ಈ ಲೇಖನದಲ್ಲಿ ಯಾಕೆ ಮಾರುತಿ ಸುಜುಕಿ ಬ್ರೆಝಾ ಎಲ್ಲರ ನೆಚ್ಚಿನ ಕಾರಾಗಿ ಮಾರ್ಪಾಡಾಗುತ್ತಿದೆ ಎಂಬುದನ್ನು ನೋಡೋಣ. ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.
ಮಾರುತಿಯ ಕಾಂಪಾಕ್ಟ್ ಎಸ್‌ಯುವಿಗಳಲ್ಲಿ ಮಾರುತಿ ಸುಜುಕಿ ಬ್ರೆಝಾ ಪ್ರಮುಖವಾದುದು. ಇತ್ತೀಚೆಗೆ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ಫ್ರಾಂಕ್ಸ್‌ಗಿಂತಲೂ ಬ್ರೆಝಾ ಒಂದು ಉತ್ತಮ ಆಯ್ಕೆ. ಇದಕ್ಕೆ ಕಾರಣ, ಬ್ರೆಝಾದಲ್ಲಿ ಉತ್ತಮ ಸ್ಥಳಾವಕಾಶವಿದ್ದು, ಹೆಚ್ಚಿನ ಪರ್ಫಾಮೆನ್ಸ್ ಅನ್ನು ಸಹ ನೀಡುತ್ತದೆ. ಹೋದ ವರ್ಷ ಮಾರುತಿ ಸುಜುಕಿ, ಸೇಲ್ ಮಾಡಿದ ಕಾರುಗಳಲ್ಲಿ ಬ್ರೆಝಾ ಎಸ್‌ಯುವಿ ಮೊದಲ ಸ್ಥಾನದಲ್ಲಿ ನಿಂತಿದ್ದು, ಒಟ್ಟು 1.70 ಲಕ್ಷ ಯುನಿಟ್ ಮಾರಾಟ ಮಾಡುವ ಮೂಲಕ ಹೊಸದೊಂದು ದಾಖಲೆ ಬರೆದಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza), ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ 4 ರೂಪಾಂತರ, ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಎಕ್ಸುಬರಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ 6 ಮೊನೊಟೋನ್, 3 ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ದೇಶೀಯ ಮಾರುಕಟ್ಟೆಯಲ್ಲಿ ಏಪ್ರಿಲ್ 1, 2023 ರಿಂದ ಫೆಬ್ರವರಿ 2024 ರವರೆಗಿನ ಆರ್ಥಿಕ ವರ್ಷದಲ್ಲಿ 155,283 ಯುನಿಟ್ ಬ್ರೆಝಾ ಎಸ್‌ಯುವಿ ಮಾರಾಟವಾಗಿದ್ದವು. ಈ ಅಂಶವೇ ಬ್ರೆಝಾ ಕಾರಿನ ಖ್ಯಾತಿ ಬಗ್ಗೆ ಬೆಳಕನ್ನು ಚೆಲ್ಲುತ್ತದೆ. ಬೆಂಗಳೂರಿನಲ್ಲಿ ಬೇಸ್ ಮಾಡೆಲ್ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ ರೂ.9.95 ಲಕ್ಷ, ಎಲ್ಎಕ್ಸ್ಐ ಸಿಎನ್‌ಜಿ ಮಾದರಿ ರೂ.11.07 ಲಕ್ಷ ಆನ್ ರೋಡ್ ಬೆಲೆಯನ್ನು ಹೊಂದಿದೆ.

ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಝಡ್ಎಕ್ಸ್ಐ (ಸಿಎನ್‌ಜಿ) ಆವೃತ್ತಿ ರೂ.14.89 ಲಕ್ಷ, ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ಮಾದರಿ ರೂ.15.48 ಲಕ್ಷ ಆನ್ ರೋಡ್ ದರವನ್ನು ಪಡೆದಿದೆ. ನೀವು ಈ ಕಾರನ್ನು ರೂ.99,000 ಡೌನ್ ಪೇಮೆಂಟ್ ಮಾಡಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇಕಡ 9.8% ಬಡ್ಡಿ ದರದಲ್ಲಿ ತಿಂಗಳಿಗೆ ರೂ.18,945 ಇಎಂಐ ಕಟ್ಟಬೇಕು.
ಈ ಕಾರು ಎರಡು ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 103 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 88 ಪಿಎಸ್ ಪವರ್ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೂ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17.38 ರಿಂದ 19.89 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 25.51 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications