Brezza: ಸಿಹಿಸುದ್ದಿ.. ಶೀಘ್ರ ಮಾರುತಿ ಸುಜುಕಿ ಬ್ರೆಝಾ ಅರ್ಬಾನೊ ಎಡಿಷನ್ ಬಿಡುಗಡೆ, ವಿಶೇಷತೆಗಳೇನು?

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶಾದ್ಯಂತ ಕಂಪನಿಯು ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್‌ಗಳನ್ನು ಹೊಂದಿದೆ. ಅಲ್ಲಿ ಆಲ್ಟೊ ಕೆ10, ಸೆಲರಿಯೊ, ವ್ಯಾಗನ್ಆರ್, ಇಗ್ನಿಸ್, ಬಲೆನೊ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ, ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಶೀಘ್ರದಲ್ಲೆಯೇ ಜನಪ್ರಿಯ ಎಸ್‌ಯುವಿ 'ಬ್ರೆಝಾ'ದ ಸ್ಪೆಷಲ್ ಎಡಿಷನ್‌ (ವಿಶೇಷ ಆವೃತ್ತಿ) ಮಾರುಕಟ್ಟೆಗೆ ಬರಲಿದೆ. ಆ ಕುರಿತ ಮಾಹಿತಿಗಳು ಇಂಟರ್‌ನೆಟ್‌ನಲ್ಲಿ ಸೋರಿಕೆಯಾಗಿವೆ.

ದೇಶೀಯವಾಗಿ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಬ್ರೆಝಾದ ಹೊಚ್ಚ ಹೊಸ ಅರ್ಬಾನೊ ಎಡಿಷನ್ (Urbano Edition), ಎಲ್ಎಕ್ಸ್ಐ ಮತ್ತು ವಿಎಕ್ಸ್ಐ ರೂಪಾಂತರ (ವೇರಿಯೆಂಟ್)ಗಳೊಂದಿಗೆ ಖರೀದಿಗೆ ಲಭ್ಯವಾಗಲಿದೆ. ಎಲ್ಎಕ್ಸ್ಐ ಅರ್ಬಾನೊ ಎಡಿಷನ್ (LXI Urbano Edition), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಬಾಡಿ ಸೈಡ್ ಮೋಲ್ಡಿಂಗ್, ವೀಲ್ ಆರ್ಚ್ ಕಿಟ್, ಮುಂಭಾಗ (ಫ್ರಂಟ್) - ಹಿಂಭಾಗ (ರೇರ್) ಸ್ಕಿಡ್ ಪ್ಲೇಟ್‌ಗಳು, ಸ್ಪೀಕರ್‌ಗಳು ಮತ್ತು ಫಾಗ್ ಲೈಟ್‌ಗಳನ್ನು ಪಡೆದುಕೊಂಡಿರಲಿದೆ.

Maruti Suzuki Brezza Urbano Edition Details Leaked Soon In Market

ಅದೇ ರೀತಿಯಲ್ಲಿ ಬ್ರೆಝಾ ವಿಎಕ್ಸ್ಐ ಅರ್ಬಾನೊ ಎಡಿಷನ್ (VXi Urbano Edition) ಕೂಡ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಬಾಡಿ ಸೈಡ್ ಮೋಲ್ಡಿಂಗ್, ವೀಲ್ ಆರ್ಚ್ ಕಿಟ್, 3ಡಿ ಫ್ಲೋರ್ ಮ್ಯಾಟ್ಸ್, ನಂಬರ್ ಪ್ಲೇಟ್ ಫ್ರೇಮ್‌ಗಳು, ಮೆಟಲ್ ಸಿಲ್ ಗಾರ್ಡ್‌ಗಳು ಮತ್ತು ಫಾಗ್ ಲೈಟ್‌ಗಳನ್ನು ಒಳಗೊಂಡಿರಲಿದೆ.

ಈ ಮಾರುತಿ ಸುಜುಕಿ ಬ್ರೆಝಾ ಅರ್ಬಾನೊ ಎಡಿಷನ್ 1.5-ಲೀಟರ್ ಫೋರ್ ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 102 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯಲಿದೆ.

Maruti Suzuki Brezza Urbano Edition Details Leaked Soon In Market

ಸದ್ಯ ಅರೆನಾ ಡೀಲರ್‌ಶಿಪ್‌ ಮೂಲಕ ಖರೀದಿಗೆ ಸಿಗುವ ಸಾಮಾನ್ಯ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯು ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ,ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳೊಂದಿಗೆ ಸಿಗುತ್ತದೆ. ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ.

ಈ ಕಾರು 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಓಡಾಟವನ್ನು ನಡೆಸಬಹುದು.

Maruti Suzuki Brezza Urbano Edition Details Leaked Soon In Market

ನೂತನ ಬ್ರೆಝಾ ಎಸ್‌ಯುವಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6-ಸ್ಪೀಕರ್ ಸೆಟಪ್, ಪ್ಯಾಡಲ್ ಶಿಫ್ಟರ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಸೀಟ್ ಬೆಲ್ಟ್ ರಿಮೈಂಡರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source Link

Article Published On: Friday, July 5, 2024, 15:08 [IST]
English summary
Maruti suzuki brezza urbano edition details leaked soon in market
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+