25 ಕಿಲೋಮೀಟರ್‌ಗೂ ಹೆಚ್ಚಿನ ಮೈಲೇಜ್: ಕಡಿಮೆ ಬೆಲೆಗೆ ಸಿಗುವ ಜನಪ್ರಿಯ ಮಾರುತಿ ಕಾರುಗಳಿವು

ದೇಶದ ಅತಿದೊಡ್ಡ ವಾಹನ ತಯಾರಿಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದ್ದು, ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇಲ್ಲಿ ಕಡಿಮೆ ಬೆಲೆಗೆ 25 ಕಿಲೋಮೀಟರ್‌ಗೂ ಹೆಚ್ಚು ಮೈಲೇಜ್ ನೀಡುವ ಕಂಪನಿಯ ಜನಪ್ರಿಯ ಕಾರುಗಳ ಬಗ್ಗೆ ತಿಳಿಸಿಕೊಂಡಿದ್ದೇವೆ.

ಮೊದಲಿಗೆ ಜನಪ್ರಿಯ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಬಗ್ಗೆ ಮಾತನಾಡೋಣ. ಇದು ರೂ.8.64 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ದೊರೆಯುವ ಈ ಕಾರಿನಲ್ಲಿ 7 ಮಂದಿ ಪ್ರಯಾಣಿಯಬಹುದು. ಪೆಟ್ರೋಲ್ ರೂಪಾಂತರಗಳು (Trims) 20.3 - 20.51 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 26.11 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

Maruti Suzuki Cars Above 25 Km Mileage: Low Price And Best Features, Ertiga, Brezza, Wagon R

ಮಾರುತಿ ಸುಜುಕಿ ಎರ್ಟಿಗಾ, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್, ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ.

ಮಾರುತಿ ಸುಜುಕಿ ಬ್ರೆಜ್ಜಾ (Maruti Suzuki Brezza) ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ ಮತ್ತು ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಪರ್ಲ್ ಮಿಡ್ನೈಟ್ ಬ್ಲಾಕ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ತೆರಳಬಹುದು.

Maruti Suzuki Cars Above 25 Km Mileage: Low Price And Best Features, Ertiga, Brezza, Wagon R

ಈ ಬ್ರೆಜ್ಜಾ ಎಸ್‌ಯುವಿ 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 17.38 ಕೆಎಂಪಿಎಲ್ - 19.8 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 25.51 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತವೆ.

ಮಾರುತಿ ಸುಜುಕಿ ಬ್ರೆಜ್ಜಾ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್‌, ಸಿಂಗಲ್ - ಪೇನ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷಿಯಿಂದ 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

Maruti Suzuki Cars Above 25 Km Mileage: Low Price And Best Features, Ertiga, Brezza, Wagon R

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R), ರೂ.5.54 ಲಕ್ಷದಿಂದ ರೂ.7.42 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 23.56 - 25.19 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 34.05 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಡಬಹುದು.

ಈ ವ್ಯಾಗನ್ಆರ್ 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 22, 2024, 16:32 [IST]
English summary
Maruti suzuki cars above 25 km mileage low price best features ertiga brezza wagon r
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+