Maruti Suzuki: ಮಾರುತಿ ಸುಜುಕಿಯಿಂದ ಗ್ರಾಹಕರಿಗೆ ಬಿಗ್ ಶಾಕ್!
ಮಾರುತಿ ಸುಜುಕಿ (Maruti Suzuki) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಲ್ಟೊ, ಸೆಲೆರಿಯೊ, ವ್ಯಾಗನ್ಆರ್, ಬ್ರೆಝಾ, ಸ್ವಿಫ್ಟ್, ಗ್ರ್ಯಾಂಡ್ ವಿಟಾರಾ ಒಳಗೊಂಡಂತೆ ಹತ್ತಾರು ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ನವೆಂಬರ್‌ನಲ್ಲಿ ಉತ್ತಮವಾದ ಬೆಳವಣಿಗೆ ಸಾಧಿಸಿದ್ದು, ಬರೋಬ್ಬರಿ 1,81,531 ಯುನಿಟ್ ವಾಹನಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಲಾದ 1,64,439 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡ 10.39% ಪ್ರಗತಿ ಸಾಧಿಸಿದೆ.
ಸದ್ಯ ತಯಾರಿಕಾ ವೆಚ್ಚಗಳು ಹೆಚ್ಚಳಗೊಂಡ ಹಿನ್ನಲೆ, ಮಾರುತಿ ಸುಜುಕಿಯು ವಿವಿಧ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ. ಜನವರಿ 1, 2025ಕ್ಕೆ ಅನ್ವಯವಾಗುವಂತೆ ಕಂಪನಿಯ ಹಲವು ಮಾಡೆಲ್‌ಗಳ ದರ ಶೇಕಡ 4% ಅಧಿಕಗೊಳ್ಳಲಿದೆ. ಈಗಾಗಲೇ ಆಡಿ, ಮರ್ಸಿಡಿಸ್, ಹ್ಯುಂಡೈ ಮತ್ತು ಬಿಎಂಡಬ್ಲ್ಯೂ ಕಂಪನಿಗಳು ಕೂಡ ಎಲ್ಲ ಕಾರುಗಳ ಬೆಲೆಯನ್ನು ಏರಿಕೆ ಮಾಡುವುದಾಗಿ ತಿಳಿಸಿವೆ.

ಮಾರುತಿ ಸುಜುಕಿ ಮಾರಾಟಗೊಳಿಸುವ ಆಯ್ದ ಕಾರುಗಳ ವಿಶೇಷತೆ ಕುರಿತಂತೆ ಮಾತನಾಡುವುದಾದರೆ, ಜನಪ್ರಿಯ ಸೆಲೆರಿಯೊ (Celerio) ಹ್ಯಾಚ್‌ಬ್ಯಾಕ್ ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಮಾರುತಿ ಸುಜುಕಿ ಸ್ವಿಫ್ಟ್ ಬಗ್ಗೆ ಹೇಳುವುದಾದರೆ, ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.6.49 ಲಕ್ಷ ಮತ್ತು ಗರಿಷ್ಠ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, ರೂ.6.66 ಲಕ್ಷದಿಂದ ರೂ.9.84 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್), 1.5-ಲೀಟರ್ ಮೈಲ್ಡ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಕಡೆಯದಾಗಿ ಮಾರುತಿ ಇನ್ವಿಕ್ಟೊ ಎಂಪಿವಿ ಬಗ್ಗೆ ಮಾತನಾಡುವುದಾದರೆ, ಇದು ರೂ.25.21 ಲಕ್ಷದಿಂದ ರೂ.28.92 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 2-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications