ನಿಮ್ಮ ಅಣ್ಣನಿಗೆ ಹೊಸ ಕಾರನ್ನು ಉಡುಗೊರೆಯಾಗಿ ನೀಡಬೇಕೇ.. ರೂ.4.99 ಲಕ್ಷಕ್ಕೆ ಸಿಗುತ್ತದೆ ಈ ಹ್ಯಾಚ್‌ಬ್ಯಾಕ್!

ಅಣ್ಣ.. ಅಭಿಮಾನದಲ್ಲಿ ಅಮ್ಮ, ಅಧಿಕಾರದಲ್ಲಿ ಅಪ್ಪ, ಪ್ರೋತ್ಸಾಹದಲ್ಲಿ ಸ್ನೇಹಿತ, ವಿಮರ್ಶೆಯಲ್ಲಿ ಶತ್ರು, ಕಲಿಸುವುದರಲ್ಲಿ ಗುರು. ಅಂತಹ ಸಹೋದರನಿಗೆ ಹೊಚ್ಚ ಹೊಸ ಕಾರನ್ನು ಉಡುಗೊರೆಯಾಗಿ ನೀಡಬೇಕು ಅಂದುಕೊಂಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಹ್ಯಾಚ್‌ಬ್ಯಾಕ್ ಸೂಕ್ತ ಆಯ್ಕೆಯಾಗಲಿದೆ. ಇಲ್ಲಿ ನೂತನ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯ (Feature)ಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ & ರೂಪಾಂತರಗಳು: ದೇಶೀಯ ಮಾರುಕಟ್ಟೆಯಲ್ಲಿ ನೂತನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ (Variant)ಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ.

Maruti Suzuki Celerio Car Good Option To Gift For Your Elder Brother Rs 4 99 Lakh Price

ಬಣ್ಣಗಳು & ಆಸನ ಆಯ್ಕೆ: ಈ ಕಾರು ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್, ಸ್ಪೀಡಿ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು. ಇದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿರುವುದರಿಂದ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಜೊತೆಗೆ 313 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ: ಮಾರುತಿ ಸುಜುಕಿ ಸೆಲೆರಿಯೊ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸಿಗುತ್ತದೆ.

Maruti Suzuki Celerio Car Good Option To Gift For Your Elder Brother Rs 4 99 Lakh Price

ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. 57 ಪಿಎಸ್ ಶಕ್ತಿ ಮತ್ತು 82 ಎನ್ಎಂ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿವೆ. ಸಿಎನ್‌ಜಿ ಮಾದರಿ ಮಾತ್ರ 34.43 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು: ಈ ಕಾರು 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸೆಲೆರಿಯೊ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

Maruti Suzuki Celerio Car Good Option To Gift For Your Elder Brother Rs 4 99 Lakh Price

ಪ್ರತಿಸ್ಪರ್ಧಿ ಕಾರುಗಳು: ಸೆಲೆರಿಯೊಗೆ ಟಾಟಾ ಟಿಯಾಗೊ (Tata Tiago) ಮತ್ತು ಸಿಟ್ರನ್ ಸಿ3 (Citroen C3) ಕಾರುಗಳು ಪ್ರಬಲ ಎದುರಾಳಿಯಾಗಿವೆ. ಹೊಸ ಟಿಯಾಗೊ ರೂ.5.65 ಲಕ್ಷದಿಂದ ರೂ.8.90 ಲಕ್ಷ ಹಾಗೂ ಸಿಟ್ರನ್ ಸಿ3 ರೂ.6.16 ಲಕ್ಷದಿಂದ ರೂ.9 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, July 14, 2024, 13:02 [IST]
English summary
Maruti suzuki celerio car good option to gift for your elder brother rs 4 99 lakh price
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+