ಮಾರುತಿ ಸುಜುಕಿಯಿಂದ ಸಿಹಿಸುದ್ದಿ: ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ನೆಕ್ಸಾ (NEXA) ಹಾಗೂ ಅರೆನಾ (Arena) ಡೀಲರ್‌ಶಿಪ್ ಮೂಲಕ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇದೀಗ ಮಾರುತಿ ಸುಜುಕಿ ಕಂಪನಿಯು ಗ್ರಾಹಕರಿಗೆ ಸಿಹಿಸುದ್ದಿಯನ್ನು ನೀಡಿದೆ. ಮಾರುತಿ ಸುಜುಕಿ ರೆನಾ (Arena) ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಆಲ್ಟೊ ಕೆ10, ಸೆಲರಿಯೊ, ಸ್ವಿಫ್ಟ್, ಡಿಸೈರ್ ಹಾಗೂ ಬ್ರೆಜಾ ಸೇರಿದಂತೆ ವಿವಿಧ ಕಾರುಗಳ ಖರೀದಿ ಮೇಲೆ ಭಾರೀ ಡಿಸ್ಕೌಂಟ್ ಘೋಷಿಸಿದೆ.
ಜನಪ್ರಿಯ ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಹ್ಯಾಚ್‌ಬ್ಯಾಕ್ ಡಿಸ್ಕೌಂಟ್ ಬಗ್ಗೆ ಮಾಹಿತಿ ಇಲ್ಲಿದೆ. ಮಾರುತಿ ಸುಜುಕಿ ಸೆಲರಿಯೊ ಕಾಗೆ ದೊಡ್ಡ ರಿಯಾಯಿತಿ ಘೋಷಿಸಿದೆ. ಸೆಲರಿಯೊ ಕಾರಿನ ಮ್ಯಾನುವಲ್ ಟ್ರಾಸ್ಮಿಷನ್ ಹಾಗೂ ಎಜಿಎಸ್ ರೂಪಾಂತರಗಳು ರೂ.40,000 ರಿಂದ ರೂ.50,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಒಳಗೊಂಡಿವೆ. ಈ ಕಾರು, ರೂ.4.99 ರಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ದೇಶೀಯ ಮಾರುಕಟ್ಟೆಯಲ್ಲಿ ನೂತನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಮಾರುತಿ ಸುಜುಕಿ ಸೆಲರಿಯೊ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ (Variant)ಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ. ಮಾರುತಿ ಸುಜುಕಿ ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಮತ್ತು ಸಿಟ್ರನ್ ಸಿ3 ಕಾರುಗಳಿಗೆ ಪೈಪೋಟಿ ನೀಡುತ್ತದೆ.
ಮಾರುತಿ ಸುಜುಕಿ ಸೆಲರಿಯೊ ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್, ಸ್ಪೀಡಿ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು. ಇದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿರುವುದರಿಂದ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಜೊತೆಗೆ 313 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಮಾರುತಿ ಸುಜುಕಿ ಸೆಲೆರಿಯೊ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸಿಗುತ್ತದೆ.
ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. 57 ಪಿಎಸ್ ಪವರ್ ಮತ್ತು 82 ಎನ್ಎಂ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕಿ.ಮೀ ಮೈಲೇಜ್ ಅನ್ನು ಹೊಂದಿವೆ. ಸಿಎನ್‌ಜಿ ಮಾದರಿ ಮಾತ್ರ 34.43 ಕಿ.ಮೀ/ಕೆಜಿವರೆಗೆ ಮೈಲೇಜ್ ನೀಡುತ್ತದೆ.

ಸೆಲೆರಿಯೊ ಕಾರು 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸೆಲೆರಿಯೊ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications