Celerio: ಮಾರುತಿ ಸುಜುಕಿ ಸೆಲರಿಯೊ ಕಾರಿಗೆ ರೂ.61000 ರಿಯಾಯಿತಿ.. ರೂ.5 ಲಕ್ಷ ಬೆಲೆ, 34 ಕಿ.ಮೀ ಮೈಲೇಜ್

ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶಾದ್ಯಂತ ಅರೆನಾ ಹಾಗೂ ನೆಕ್ಸಾ ಡೀಲರ್‌ಗಳು ಈ ಏಪ್ರಿಲ್‌ನಲ್ಲಿ ವಿವಿಧ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿವೆ. ಅದರಲ್ಲೂ ಜನಪ್ರಿಯ ಸೆಲರಿಯೊ (Celerio) ಹ್ಯಾಚ್‌ಬ್ಯಾಕ್‌ ದೊಡ್ಡಮಟ್ಟದಲ್ಲಿ ಡಿಸ್ಕೌಂಟ್ ಆಫರ್ ಪಡೆದಿದೆ.

ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಕಾರಿನ ಆಟೋಮೆಟಿಕ್ ಆವೃತ್ತಿ ರೂ.61,000, ಮ್ಯಾನುವಲ್ ಮಾದರಿ ರೂ.56,000 ಹಾಗೂ ಸಿಎನ್‌ಜಿ ರೂಪಾಂತರ ರೂ.46,000 ರಿಯಾಯಿತಿಯನ್ನು ಹೊಂದಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಸೆಲರಿಯೊ ಹ್ಯಾಚ್‌ಬ್ಯಾಕ್‌, ರೂ.5.37 ಲಕ್ಷದಿಂದ ರೂ.7.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ.

Maruti Suzuki Celerio get up to 61000 discount in April 2024 rs 5 lakh price 34 km mileage

ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ ಆಯ್ಕೆಯಲ್ಲೂ ಲಭ್ಯವಿದೆ. ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್, ಸ್ಪೀಡಿ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳನ್ನು ಹೊಂದಿದೆ. ಪುಟ್ಟ ಕಾರಾಗಿದ್ದರೂ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಮಾರುತಿ ಸುಜುಕಿ ಸೆಲರಿಯೊ ಕಾರು 2 ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1 - ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 89 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5 - ಸ್ವೀಡ್ ಮ್ಯಾನುವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೂ ಸಿಗುತ್ತದೆ.

Maruti Suzuki Celerio get up to 61000 discount in April 2024 rs 5 lakh price 34 km mileage

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. 57 ಪಿಎಸ್ ಪವರ್ ಹಾಗೂ 82 ಎನ್ಎಂ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ. ಸಿಎನ್‌ಜಿ ಮಾದರಿ 34.43 ಕೆಎಂ/ಕೆಜಿ ಇಂಧನ ದಕ್ಷತೆಯನ್ನು ಪಡೆದಿದೆ.

ಈ ಮಾರುತಿ ಸುಜುಕಿ ಸೆಲರಿಯೊ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7 - ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್ & ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿವನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ಮಾರುತಿ ಸುಜುಕಿ ಸೆಲರಿಯೊ ಕಾರಿಗೆ ಟಾಟಾ ಟಿಯಾಗೊ (Tata Tiago) ಹಾಗೂ ಸಿಟ್ರಸ್ ಸಿ3 (Citroen C3) ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 9, 2024, 9:30 [IST]
English summary
Maruti suzuki celerio get upto 61000 discount april 2024 rs 5 lakh price 34 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+