Maruti Suzuki: 34.43 Km ಮೈಲೇಜ್.. 5-ಸೀಟರ್, ಅಗ್ಗದ ಮಾರುತಿ ಕಾರು ಬಿಡುಗಡೆ.. ನಾಳೆವರೆಗೆ ಮಾತ್ರ ಖರೀದಿಗೆ ಲಭ್ಯ!
ಮಾರುತಿ ಸುಜುಕಿ ನಂ.1 ಕಾರು ತಯಾರಕ ಕಂಪನಿಯಾಗಿದ್ದು, ಸಣ್ಣ ಕಾರು ವಿಭಾಗದಲ್ಲಿ ಮುಂಚೂಣಿಯಲ್ಲಿದೆ. ಈ ವಿಭಾಗದಲ್ಲಿ ಕಂಪನಿಯು ಆಲ್ಟೊ, ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ, ಮಾರುತಿ ಸುಜುಕಿ ಸೀಮಿತ ಅವಧಿಗೆ 'ಸೆಲೆರಿಯೊ ಲಿಮಿಟೆಡ್ ಎಡಿಷನ್'ನ್ನು ಪರಿಚಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಮಾರುತಿ ಸುಜುಕಿ ಸೆಲೆರಿಯೊ ಲಿಮಿಟೆಡ್ ಎಡಿಷನ್ (Maruti Suzuki Celerio Limited Edition) ಹ್ಯಾಚ್‌ಬ್ಯಾಕ್, ರೂ.4.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಗೆ ಮಾರಾಟಕ್ಕೆ ಬಂದಿದೆ. ಈ ಕಾರು ನಾಳೆವರೆಗೆ (ಡಿ.20) ಮಾತ್ರ ಖರೀದಿಗೆ ಲಭ್ಯವಾಗಲಿದೆ. ಇದರ ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ, ಹೆಚ್ಚುವರಿಯಾಗಿ ರೂ.11,000 ಮೌಲ್ಯದ ಉಚಿತ ಆಕ್ಸಸರೀಸ್ ಪ್ಯಾಕೇಜ್‌ನೊಂದಿಗೆ ಬಿಡುಗಡೆಗೊಳಿಸಲಾಗಿದೆ.

ಹೊಚ್ಚ ಹೊಸ ಮಾರುತಿ ಸುಜುಕಿ ಸೆಲೆರಿಯೊ ಲಿಮಿಟೆಡ್ ಎಡಿಷನ್ ಕಾರು ಆಕ್ಸಸರೀಸ್ ಪ್ಯಾಕೇಜ್‌ನ ಭಾಗವಾಗಿ ಎಕ್ಸ್ಟ್ರಿಯರ್ ಬಾಡಿ ಕಿಟ್, ಕ್ರೋಮ್ ಸೈಡ್ ಮೋಲ್ಡಿಂಗ್, ರೂಫ್ ಸ್ಪಾಯ್ಲರ್, ಟೂ - ಟೋನ್ ಡೋರ್ ಸಿಲ್ ಗಾರ್ಡ್‌ಗಳು & ಕಸ್ಟಮ್ ಫ್ಲೋರ್ ಮ್ಯಾಟ್‌ಗಳನ್ನು ಒಳಗೊಂಡಿದೆ. ಇವು ಈ ಹ್ಯಾಚ್‌ಬ್ಯಾಕ್‌ನ ಅಂದವನ್ನು ಹೆಚ್ಚಿಸಲು ನೆರವಾಗಲಿವೆ.
ಸದ್ಯ, ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ ಸ್ಟ್ಯಾಂಡರ್ಡ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್, ಕನಿಷ್ಠ ರೂ.5.36 ಲಕ್ಷ ಮತ್ತು ಗರಿಷ್ಠ ರೂ.7.04 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ ಮತ್ತು ಸಿಲ್ಕಿ ಸಿಲ್ವರ್ ಅನೇಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಎರಡು ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ 57 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.
ನೂತನ ಸೆಲೆರಿಯೊ ಹ್ಯಾಚ್‌ಬ್ಯಾಕ್ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು 313 ಲೀಟರ್‌ನ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಮಾರುತಿ ಸುಜುಕಿ ಸೆಲೆರಿಯೊ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ & ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications