ಈ ಜನಪ್ರಿಯ ಕಾರಿನ ಮಾರಾಟ ಸ್ವಲ್ಪ ಇಳಿಕೆ.. ಯಾವಾಗ ಬೇಕಾದರೂ ಶೈನ್ ಆಗಬಹುದು.. ಬೆಲೆ ರೂ.4.99 ಲಕ್ಷ
ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಮನೆ ಮಾತಾಗಿದೆ. ನೆಕ್ಸಾ ಮತ್ತು ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ, ಬಲೆನೊ, ಫ್ರಾಂಕ್ಸ್, ವ್ಯಾಗನ್ಆರ್, ಇಗ್ನಿಸ್, ಜಿಮ್ನಿ ಸೇರಿದಂತೆ ಹಲವು ಕಾರುಗಳನ್ನು ಮಾರುತ್ತಿದೆ. ಇತ್ತೀಚೆಗೆ ಕಂಪನಿಯು ಜೂನ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿತ್ತು. ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಲಾದರೂ ಕೆಲವೊಂದು ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳ ಮಾರಾಟದಲ್ಲಿ ಸ್ವಲ್ಪ ಮಟ್ಟಿಗೆ ನಷ್ಟ ಅನುಭವಿಸಿದ್ದು, ಜನಪ್ರಿಯ ಸೆಲೆರಿಯೊ (Celerio) ಹ್ಯಾಚ್‌ಬ್ಯಾಕ್‌ನ್ನು ಮಾರುವಲ್ಲಿ ಕೂಡ ಹಿನ್ನೆಡೆಯಾಗಿದೆ.
ಮಾರುತಿ ಸುಜುಕಿ, ಜೂನ್ (2024)ನಲ್ಲಿ 2,985 ಸೆಲೆರಿಯೊ ಕಾರುಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 3,399 ಯುನಿಟ್‌ಗೆ ಹೋಲಿಕೆ ಮಾಡಿದರೆ, ಶೇಕಡ 12.18% ಕುಸಿತಕಂಡಿದೆ. ಮಾರುತಿ ಸೆಲೆರಿಯೊ ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದ್ದರೂ ಮಾರಾಟ ಪ್ರಮಾಣ ಇಳಿಕೆಯಾಗಿರುವ ಬಗ್ಗೆ ನಿಖರವಾದ ಕಾರಣಗಳು ಬಹಿರಂಗಗೊಂಡಿಲ್ಲ. ಆದಾಗ್ಯೂ, ಮುಂಬರುವ ತಿಂಗಳಲ್ಲಿ ಮಾರಾಟ ಸಂಖ್ಯೆಯೂ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ದರದಲ್ಲಿ ಸಿಗುತ್ತದೆ. ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರ (Variant)ಗಳ ಆಯ್ಕೆಯನ್ನು ಸಹ ಪಡೆದಿದೆ.
ಮಾರುತಿ ಸುಜುಕಿ ಸೆಲೆರಿಯೊ ಕಾರು 2 ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 89 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ಲಭ್ಯವಿದೆ.

ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಹೊಂದಿದೆ. 57 ಪಿಎಸ್ ಶಕ್ತಿ ಹಾಗೂ 82 ಎನ್ಎಂ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, ಪೆಟ್ರೋಲ್ ಮಾದರಿಗಳು 25.24 ರಿಂದ 26.68 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರ 34.43 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಕೆಫೀನ್ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲಾಕ್, ಗ್ಲಿಸ್ಟೆನಿಂಗ್ ಗ್ರೇ, ಸಿಲ್ಕಿ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸೆಲೆರಿಯೊ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಟಾಟಾ ಟಿಯಾಗೊ ಮತ್ತು ಸಿಟ್ರನ್ ಸಿ3 ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications