ಹೊಸ ಮಾರುತಿ ಸುಜುಕಿ ಸಿಯಾಜ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಏನು, EMI ಏನು?
ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಸಿಯಾಜ್ (Ciaz) ಸೆಡಾನ್ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.
ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz) ಸೆಡಾನ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯುತ್ತದೆ. ಬೆಂಗಳೂರಿನಲ್ಲಿ ಇದರ ಬೇಸ್ ಮಾಡೆಲ್ (ಆರಂಭಿಕ ಮಾದರಿ) 'ಸಿಗ್ಮಾ' ರೂ.11.24 ಲಕ್ಷ, 'ಡೆಲ್ಟಾ' ರೂ.11.95 ಲಕ್ಷ, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳುವ 'ಜಿಟಾ' ರೂ.12.88 ಲಕ್ಷ, ಡೆಲ್ಟಾ ಎಟಿ ರೂ.13.73 ಲಕ್ಷ, 'ಆಲ್ಫಾ' ರೂ.13.84 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ಇನ್ನುಳಿದಂತೆ 'ಜಿಟಾ ಎಟಿ' ರೂ.14.22 ಲಕ್ಷ ಹಾಗೂ ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ) ಆಗಿರುವ 'ಆಲ್ಫಾ ಎಟಿ' ರೂ.15.19 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ನೀವು ಈ ಸಿಯಾಜ್ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ 5 ವರ್ಷದ ಅವಧಿಗೆ ಶೇಕಡ 9.8% ಬಡ್ಡಿದರದಲ್ಲಿ ಮಾಸಿಕ ರೂ.19,551 ಇಎಂಐ (EMI) ಕಟ್ಟಬೇಕು.
ನೂತನ ಮಾರುತಿ ಸುಜುಕಿ ಸಿಯಾಜ್ ಸೆಡಾನ್ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಸೆಲೆಸ್ಟಿಯಲ್ ಬ್ಲೂ, ಡಿಗ್ನಿಟಿ ಬ್ರೌನ್, ಪರ್ಲ್ ಮಿಡ್ನೈಟ್ ಬ್ಲ್ಯಾಕ್, ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಪ್ರವಾಸ ಅಥವಾ ದೂರದ ಊರುಗಳಿಗೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 510 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ಈ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 105 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 138 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 4-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಹೊಂದಿದೆ. ಇಂಧನ ದಕ್ಷತೆ (Fuel Efficiency) ವಿಚಾರವಾಗಿ ಹೇಳುವುದಾದರೆ, 20.04 ರಿಂದ 20.65 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಹೊಸ ಮಾರುತಿ ಸುಜುಕಿ ಸಿಯಾಜ್ ಸೆಡಾನ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್, ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ.
ಸಿಯಾಜ್ ಕಾರಿಗೆ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ, ಸ್ಕೋಡಾ ಸ್ಲಾವಿಯಾ ಹಾಗೂ ಪೋಕ್ಸ್‌ವ್ಯಾಗನ್ ವರ್ಟಸ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಸೆಡಾನ್ ನ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications