ಅತಿ ಶೀಘ್ರದಲ್ಲೇ ಮಧ್ಯಮ ವರ್ಗದವರಿಗಾಗಿ ಹೊಸ ಮಾರುತಿ ಕಾರು ಬಿಡುಗಡೆ.. 5-ಸೀಟರ್.. ಬೆಲೆ ತುಂಬಾ ಕಡಿಮೆ?

ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯು ಸಾಮಾನ್ಯ ವರ್ಗದ ಜನರಿಗೆ ನೆರವಾಗುವ ಸಲುವಾಗಿ ನವೀಕರಿಸಿದ ಡಿಜೈರ್ (Dzire) ಸೆಡಾನ್‌ನ್ನು ಮಾರಾಟಕ್ಕೆ ತರಲು ಬಹಳಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕಾರನ್ನು 2025ರ ಜನವರಿಯಲ್ಲಿ ಏರ್ಪಡಿಸಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳುವ ಸಾಧ್ಯತೆಯಿದೆ.

ನೂತನ ತಲೆಮಾರಿನ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ವಿನ್ಯಾಸ ಹೇಗಿರಲಿದೆ ಎಂಬುದರ ಕುರಿತಂತೆ ಮೂಲಗಳಿಂದ ಒಂದಷ್ಟು ವಿವರಗಳು ಲಭ್ಯವಾಗಿದೆ. ಈ ಕಾರು ದೊಡ್ಡದಾದ ಗ್ರಿಲ್, ಫುಲ್-ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಫಾಗ್ ಲೈಟ್‌ಗಳು, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಬಂಪರ್‌ಗಳು ನವೀನವಾಗಿರುವ ಅಲಾಯ್ ವೀಲ್‌ಗಳು, ಟ್ರೈ-ಆರೋ ಎಲ್‌ಇಡಿ ಟೈಲ್‌ಲೈಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

Maruti Suzuki Dzire Car Some Details Liked Expected Price And Features Details

ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ ಹೊಂದಿರಲಿದೆ. 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 108 ಎನ್ಎಂ (ನ್ಯೂಟನ ಮೀಟರ್) ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿರಲಿದೆ ಎನ್ನಲಾಗಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ಖರೀದಿಗೆ ದೊರೆಯುವ ಸಾಧ್ಯತೆಯಿದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ದೊಡ್ಡದಾಗಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, 6-ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.

Maruti Suzuki Dzire Car Some Details Liked Expected Price And Features Details

ನೂತನ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.6.50 ಲಕ್ಷದಿಂದ ರೂ.10.50 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಹೋಂಡಾ ಅಮೇಜ್, ಹ್ಯುಂಡೈ ಔರಾ ಹಾಗೂ ಟಾಟಾ ಟಿಗೊರ್‌ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ ಎಂದು ಹೇಳಲಾಗಿದೆ.

ಈಚೆಗೆ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ (Maruti Suzuki Swift CNG) ಹ್ಯಾಚ್‌ಬ್ಯಾಕ್‌ ಬಗ್ಗೆ ಹೇಳುವುದಾದರೆ, ಇದು ರೂ.8.19 ಲಕ್ಷದಿಂದ ರೂ.9.19 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. ವಿಎಕ್ಸ್ಐ, ವಿಎಕ್ಸ್ಐ (ಒ) ಹಾಗೂ ಝಡ್ಎಕ್ಸ್ಐ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. 5 ಆಸನ ಆಯ್ಕೆಯನ್ನು ಹೊಂದಿದೆ.

ನೂತನ ಸ್ವಿಫ್ಟ್ ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Carwale

Article Published On: Tuesday, September 17, 2024, 8:30 [IST]
English summary
Maruti suzuki dzire car some details liked expected price features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+