Maruti Suzuki: ಮಾರುತಿ ಸುಜುಕಿ ಡಿಜೈರ್ ಕಾರುಗಳಿಗೆ ಮನಸೋತ ಗ್ರಾಹಕರು.. ಇನ್ಮುಂದೆ ಕ್ಯೂ ನಿಲ್ಲುವುದು ಗ್ಯಾರಂಟಿ!
ಮಾರುತಿ ಸುಜುಕಿ ಇಂಡಿಯಾ (Maruti Suzuki India), ನಂಬರ್ 1 ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಡಿಜೈರ್' ಜನಮೆಚ್ಚಿದ ಸೆಡಾನ್ ಎಂದೇ ಹೆಸರುವಾಸಿಯಾಗಿದೆ. ಈ ಕಾರನ್ನು ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಜನವರಿಯಿಂದ ನವೆಂಬರ್‌ವರೆಗೆ (2024) ಬರೋಬ್ಬರಿ 1,51,415 ಯುನಿಟ್ ಡಿಜೈರ್ ಸೆಡಾನ್‌ಗಳು ಮಾರಾಟಗೊಂಡಿವೆ. ಇತರೆ ಕಂಪನಿ ಸೆಡಾನ್‌ಗಳಿಗೆ ಹೋಲಿಕೆ ಮಾಡಿದರೆ, ಡಿಜೈರ್ ಬಹುತೇಕ ಎಲ್ಲ ತಿಂಗಳು ಮೊದಲ ಸ್ಥಾನದಲ್ಲಿದೆ.
ಎಸ್‌ಯುವಿಗಳ ತೀವ್ರ ಸ್ಪರ್ಧೆಯ ನಡೆವೆಯೂ ಕಳೆದ ತಿಂಗಳು (ನವೆಂಬರ್ - 2024) ಮಾರುತಿ ಸುಜುಕಿ ಕಂಪನಿಯು 11,779 ಡಿಜೈರ್ ಸೆಡಾನ್‌ಗಳನ್ನು ಮಾರಾಟಗೊಳಿಸಿತ್ತು. 2023ರ ನವೆಂಬರ್‌ನಲ್ಲಿ ಮಾರಲ್ಪಟ್ಟ 15,965 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 26% ಕುಸಿತವಾಗಿದೆ. ಆದರೆ, ನ.11ರಂದು ಮಾರಾಟಕ್ಕೆ ಬಂದಿರುವ 4ನೇ ತಲೆಮಾರಿನ ನೂತನ 5-ಸ್ಟಾರ್ ಸೇಫ್ಟಿ ಡಿಜೈರ್ ಸೆಡಾನ್‌ನಿಂದ ಈ ಡಿಸೆಂಬರ್‌ನಲ್ಲಿ ಮಾರಾಟ ಪ್ರಮಾಣ ಹೆಚ್ಚಿನ ನೀರಿಕ್ಷೆಯಿದೆ.

ಅದಕ್ಕೆ ಸಾಕ್ಷಿ ಎಂಬಂತೆ ನೂತನ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌ಗಾಗಿ ಬುಕ್ಕಿಂಗ್ ಆರಂಭಿಸಿದ ಕೆಲವೇ ದಿನಗಳಲ್ಲಿ 30,000ಕ್ಕೂ ಅಧಿಕ ಆರ್ಡರ್‌ಗಳನ್ನು ಪಡೆದುಕೊಂಡಿತ್ತು. ದಿನವೊಂದಕ್ಕೆ ಸರಿ ಸುಮಾರು 1,000 ಖರೀದಿದಾರರೂ ಈ ಡಿಜೈರ್ ಸೆಡಾನ್‌ಗಳನ್ನು ಬುಕ್ಕಿಂಗ್ ಮಾಡಿದ್ದರು. ಈಗಲೂ ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಆರ್ಡರ್ ಮಾಡುತ್ತಿದ್ದಾರೆ.
ಸದ್ಯ, ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಕನಿಷ್ಠ ರೂ.6.79 ಲಕ್ಷ ಮತ್ತು ಗರಿಷ್ಠ ರೂ.10.14 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಎಕ್ಸ್ಐ & ವಿಎಕ್ಸ್ಐ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು 1.2-ಲೀಟರ್ ಝಡ್ ಸೀರೀಸ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.79 ರಿಂದ 25.71 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಮಾರುತಿ ಡಿಜೈರ್ ಸೆಡಾನ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಡಿಜೈರ್ ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿರುವ 'ಮಾರುತಿ ಸುಜುಕಿ' ಕಂಪನಿಯ ಮೊದಲ ಕಾರಾಗಿ ಈ ಡಿಜೈರ್ ಹೊರಹೊಮ್ಮಿದೆ. ಇದು 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications