Maruti Suzuki: ಸದ್ದಿಲ್ಲದೇ ಹೊಸ ಎಲೆಕ್ಟ್ರಿಕ್ ಕಾರು 'ಇ ವಿಟಾರಾ' ಅನಾವರಣಕ್ಕೆ ಮುಹೂರ್ತ ನಿಗದಿ.. ಬೆಲೆ ಎಷ್ಟಿರಲಿದೆ?
ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ (Maruti Suzuki) ಕೈಗೆಟುಕುವ ಬೆಲೆಯಲ್ಲಿ ಇಂಧನ ಚಾಲಿತ (ಪೆಟ್ರೋಲ್/ಸಿಎನ್‌ಜಿ) ಕಾರುಗಳ ಮಾರಾಟಕ್ಕೆ ಹೆಸರುವಾಸಿಯಾಗಿದೆ. ಸದ್ಯ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ತಯಾರಿಯನ್ನು ನಡೆದುತ್ತಿದೆ. ಉತ್ಪಾದನೆಗೆ ಸಿದ್ಧಗೊಂಡಿರುವ ಹೊಚ್ಚ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಇ ವಿಟಾರಾ (e Vitara) ಅನಾವರಣಗೊಳಿಸಲು ಮಹೂರ್ತ ನಿಗದಿಪಡಿಸಿದೆ. ನೂತನ ಕಾರನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಯೋಜಿಸಿರುವ 'ಭಾರತ್ ಮೊಬಿಲಿಟಿ ಎಕ್ಸ್‌ಪೋ 2025' ರಲ್ಲಿ ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ.
ನೂತನ ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara) ಹೊರಭಾಗದಲ್ಲಿ ಆಕರ್ಷಕ ವಿನ್ಯಾಸ (ಡಿಸೈನ್) ಹೊಂದಿದೆ. ಈ ಕಾರನ್ನು ಇಟಲಿಯ ಮಿಲನ್‌ನಲ್ಲಿ ಆಯೋಜಿಸಿದ್ದ ಐಕ್ಮಾ 2024 (EICMA 2024) ಶೋನಲ್ಲಿ ಪ್ರದರ್ಶಿಸಲಾಗಿತ್ತು. ಹೊಸ ಇ ವಿಟಾರಾ ಮುಂಭಾಗ (ಫ್ರಂಟ್) 'ವೈ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಕನೆಕ್ಟ್ಡ್ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಹಿಂಭಾಗ (ರೇರ್) ಹೆಚ್ಚು ದಪ್ಪವಾಗಿರುವ ಬಂಪರ್‌ನ್ನು ಪಡೆದಿದೆ.

ಹೊಚ್ಚ ಹೊಸ ಮಾರುತಿ ಸುಜುಕಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಆರಂಭದಲ್ಲಿ 'ಇವಿಎಕ್ಸ್' ಎಂದು ಹೆಸರಿಸಲಾಗಿತ್ತು. ಈ ಕಾರು 4,275 ಎಂಎಂ ಉದ್ದ, 1,800 ಎಂಎಂ ಅಗಲ ಹಾಗೂ 1,635 ಎಂಎಂ ಎತ್ತರವಿದೆ. 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಸಹ ಇದೆ.
ನೂತನ ಮಾರುತಿ ಇ ವಿಟಾರಾ ಎಲೆಕ್ಟ್ರಿಕ್ ಕಾರು ಶಕ್ತಿಯುತ 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಬರೋಬ್ಬರಿ 400 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

ಇದರ 49 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 142 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ ಎನ್ನಲಾಗಿದೆ. ವಿಶೇಷವಾಗಿ ಈ ಬ್ಯಾಟರಿಯನ್ನು 2ಡಬ್ಲ್ಯೂಡಿ (ಟೂ-ವೀಲ್ ಡ್ರೈವ್) ಟೆಕ್ನಾಲಜಿಯೊಂದಿಗೆ ಹೊಂದಿಸಲಾಗಿದೆ.
ಮತ್ತೊಂದು 2ಡಬ್ಲ್ಯೂಡಿ ಟೆಕ್ನಾಲಜಿ ಹಾಗೂ 61 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಕಾರಿನಲ್ಲಿ ಉಪಯೋಗಿಸಲಾಗಿರುವ ಎಲೆಕ್ಟ್ರಿಕ್ ಮೋಟಾರ್, 172 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇದೇ ಬ್ಯಾಟರಿಯೊಂದಿಗೆ 4ಡಬ್ಲ್ಯೂಡಿ (ಫೋರ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದುಕೊಂಡಿರುವ ಕಾರು, 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಮಾರುತಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಡುಯಲ್ ಡ್ಯಾಶ್‌ಬೋರ್ಡ್ ಸ್ಕ್ರೀನ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ವೈರ್‌ಲೆಸ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಆಟೋ ಹೋಲ್ಡ್ ಫಂಕ್ಷನ್ ಮತ್ತು ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.
ನೂತನ ಇ ವಿಟಾರಾ ಕಾರು ರೂ.20 ರಿಂದ ರೂ.25 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾದ್ಯತೆಯಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ, ಟಾಟಾ ಕರ್ವ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಹಾಗೂ ಎಂಜಿ ಝಡ್‌ಎಸ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications