Maruti: ಸದ್ದಿಲ್ಲದೇ ನೂತನ 'ಇ ವಿಟಾರಾ' ಎಲೆಕ್ಟ್ರಿಕ್ ಕಾರಿನ ಪರೀಕ್ಷೆ.. ಬೆಲೆ ಎಷ್ಟಿರಲಿದೆ, ಜನವರಿಯಲ್ಲೇ ಬಿಡುಗಡೆ?
ಮಾರುತಿ ಸುಜುಕಿ (Maruti Suzuki) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಇಂಧನ ಚಾಲಿತ (ಪೆಟ್ರೋಲ್/ಸಿಎನ್‌ಜಿ) ಕಾರುಗಳ ಮಾರಾಟದಿಂದ ಹೆಚ್ಚಿನ ಜನಮನ್ನಣೆ ಗಳಿಸಿದೆ. ಸದ್ದಿಲ್ಲದೇ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಬಿಡುಗಡೆಗೊಳಿಸಲು ಕೂಡ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡರೆ ನಡೆದರೆ, ಕಂಪನಿಯು ಅತಿ ಶೀಘ್ರದಲ್ಲಿಯೇ (ಜನವರಿ 2025) ನೂತನ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೆ ತರಲಿದೆ ಎನ್ನಲಾಗಿದೆ.
ಸದ್ಯ ಹೊಚ್ಚ ಹೊಸ ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಕಾರು, ಹರಿಯಾಣದ ಗುರುಗ್ರಾಮದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಕಾರನ್ನು ಪ್ಲಾಸ್ಟಿಕ್ ಕವರ್‌ನಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಆದರೂ ಕೆಲವೊಂದು ವಿನ್ಯಾಸದ ಅಂಶಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದವು.

ನೂತನ ಮಾರುತಿ ಸುಜುಕಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ, 18-ಇಂಚಿನ ಅಲಾಯ್ ವೀಲ್‌ಗಳು, ಎಂಆರ್‌ಎಫ್ ಟೈರ್‌ಗಳು, ಮುಂಭಾಗದ (ಫ್ರಂಟ್) ಎಡ ಭಾಗದಲ್ಲಿರುವ ಫೆಂಡರ್‌ನಲ್ಲಿ ಚಾರ್ಜಿಂಗ್ ಪೋರ್ಟ್ ಹೊಂದಿರುವುದನ್ನು ಕಾಣಬಹುದು. ಇದರೊಟ್ಟಿಗೆ ರೂಫ್‌ಲೈನ್ ಸ್ವಲ್ಪ ಇಳಿಜಾರಾಗಿದ್ದು, ಹಿಂಭಾಗ (ರೇರ್) 'ವೈ' ಆಕಾರಕ್ಕೆ ಹೋಲಿಕೆಯಾಗುವ ಟೈಲ್‌ಲೈಟ್‌ಗಳನ್ನು ಪಡೆದಿರುವುದನ್ನು ಸಹ ನೋಡಬಹುದು.
ಈಗಾಗಲೇ, ಹೊಸ ಇ ವಿಟಾರಾ ಎಸ್‌ಯುವಿಯನ್ನು ಇಟಲಿಯ ಮಿಲನ್‌ನಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದ ಐಕ್ಮಾ 2024 ಶೋನಲ್ಲಿಯೂ ಪ್ರದರ್ಶಿಸಲಾಗಿತ್ತು. ವಿಶೇಷವಾಗಿ ಈ ಕಾರು, 2,700 ಎಂಎಂ ವೀಲ್‌ಬೇಸ್ & 180 ಎಂಎಂ ಗ್ರೌಂಡ್ ಕ್ಲಿಯರೆನ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

ಹೊಸ ಮಾರುತಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ 49 ಕೆಡಬ್ಲ್ಯೂಹೆಚ್ ಹಾಗೂ 61 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿರುವ ನಿರೀಕ್ಷೆಯಿದೆ. ಭರ್ತಿ ಚಾರ್ಜ್‌ನಲ್ಲಿ 400 ಕಿಲೋಮೀಟರ್‌ವರೆಗೆ ಓಡಬಹುದು ಎನ್ನಲಾಗಿದೆ. ಹಾಗೆಯೇ 2ಡಬ್ಲ್ಯೂಡಿ (ಟೂ-ವೀಲ್ ಡ್ರೈವ್) ಮತ್ತು 4ಡಬ್ಲ್ಯೂಡಿ (ಫೋರ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿರಬಹುದು ಎಂದು ಹೇಳಲಾಗಿದೆ.
ಈ ಕಾರು ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್ ಸೆಟಪ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಕ್ರೂಸ್ ಕಂಟ್ರೋಲ್, ಆಟೋ ಹೋಲ್ಡ್ ಫಂಕ್ಷನ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ನೂತನ ಮಾರುತಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈ ಕಾರು ಕನಿಷ್ಠ ರೂ.20 ಲಕ್ಷ ಮತ್ತು ಗರಿಷ್ಠ ರೂ.25 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ. ಈ ಎಲೆಕ್ಟ್ರಿಕ್ ಕಾರಿಗೆ ಟಾಟಾ ನೆಕ್ಸಾನ್ ಇವಿ, ಟಾಟಾ ಕರ್ವ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಮತ್ತು ಬಿಇ 6ಇ ಎಲೆಕ್ಟ್ರಿಕ್ ಎಸ್‌ಯುವಿಗಳು ದೊಡ್ಡ ಎದುರಾಳಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Rushlane


Click it and Unblock the Notifications