Eeco: ಕಡಿಮೆ ಬೆಲೆ.. 7-ಸೀಟರ್.. ಮಾರುತಿ ಸುಜುಕಿ ಇಕೋ ವ್ಯಾನ್ ಖರೀದಿಸಬೇಕೇ.. ಆನ್-ರೋಡ್ ದರವೆಷ್ಟು, EMI ಏನು?

ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಓಮ್ನಿ (Maruti Suzuki Omni) ದೊಡ್ಡಮಟ್ಟದಲ್ಲಿ ಜನಪ್ರಿಯವಾಗಿತ್ತು. ಇದೊಂದು ವ್ಯಾನ್ ಆಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಮ ವರ್ಗದ ಜನರು ಇಷ್ಟಪಟ್ಟು ಖರೀದಿಸುತ್ತಿದ್ದರು. ಈ ಓಮ್ನಿ ಜಾಗಕ್ಕೆ ಒಂದಷ್ಟು ಹೊಸತನಗಳೊಂದಿಗೆ 2010ರಲ್ಲಿ ಇಕೋ (Eeco) ವ್ಯಾನ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಕೈಗೆಟುಕುವ ಬೆಲೆ ಹಾಗೂ 5/7-ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದ್ದು, ಈಗಲೂ ಬಹುತೇಕರ ಆಯ್ಕೆಯ ವಾಹನವಾಗಿದೆ. ನಾವಿಲ್ಲಿ ನೂತನ ಇಕೋ ವ್ಯಾನ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಕುರಿತಂತೆ ಸಂಪೂರ್ಣವಾದ ವಿವರವನ್ನು ತಿಳಿಸಿಕೊಟ್ಟಿದ್ದೇವೆ.

ದೇಶೀಯ ಮಾರುಕಟ್ಟೆಯಯಲ್ಲಿ ಮಾರುತಿ ಸುಜುಕಿ ಇಕೋ ವ್ಯಾನ್‌ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಬೆಂಗಳೂರಿನಲ್ಲಿ ಇದರ 7 ಆಸನಗಳ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.6.43 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.1 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ವ್ಯಾನ್‌ನ್ನು ಖರೀದಿಸಿದರೆ, ರೂ.5.43 ಲಕ್ಷ ಸಾಲವಿರುತ್ತದೆ. ಆ ಮೊತ್ತಕ್ಕೆ ಶೇಕಡ 9.8% ಬಡ್ಡಿದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.11,493 ಇಎಂಐ ಕಟ್ಟಬೇಕು.

Maruti Suzuki Eeco On Road Price And Emi Details

ಈ ಮಾರುತಿ ಸುಜುಕಿ ಇಕೋ (Maruti Suzuki Eeco) ವ್ಯಾನ್‌ನ 5 ಆಸನಗಳ ಎಸಿ (ಪೆಟ್ರೋಲ್) ರೂಪಾಂತರ, ರೂ.6.47 ಲಕ್ಷ ಆನ್-ರೋಡ್ (On-Road) ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಇಕೋ ವ್ಯಾನ್‌ನ್ನು ತೆಗೆದುಕೊಂಡರೆ, ರೂ.5.47 ಲಕ್ಷ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 9.8% ಬಡ್ಡಿಯನ್ನು ಹಾಕಿ, 5 ವರ್ಷದ ಅವಧಿಗೆ ಮಾಸಿಕ ರೂ.11,569 ಇಎಂಐ (EMI) ಪಾವತಿಸಬೇಕು.

ನೂತನ ಮಾರುತಿ ಸುಜುಕಿ ಇಕೋ ವ್ಯಾನ್‌ನ 5 ಆಸನಗಳ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.6.90 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ವ್ಯಾನ್‌ನ್ನು ಮನೆಗೆ ತಂದರೆ, ರೂ.5.89 ಲಕ್ಷ ಸಾಲವಿರುತ್ತದೆ. ಶೇಕಡ 9.8% ಬಡ್ಡಿದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.12,476 ಇಎಂಐ ಕಟ್ಟಬೇಕು.

Maruti Suzuki Eeco On Road Price And Emi Details

ಈ ಮಾರುತಿ ಸುಜುಕಿ ಇಕೋ ವ್ಯಾನ್‌ನ 5 ಆಸನಗಳ ಸ್ಟ್ಯಾಂಡರ್ಡ್ ಎಸಿ (ಸಿಎನ್‌ಜಿ) ರೂಪಾಂತರ, ರೂ.6.86 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಇಕೋ ವ್ಯಾನ್‌ನ್ನು ಖರೀದಿಸಿದರೆ, ರೂ.5.86 ಲಕ್ಷ ಸಾಲ ಬಾಕಿಯಿರುತ್ತದೆ. ಆ ಮೊತ್ತಕ್ಕೆ ಶೇಕಡ 9.8% ಬಡ್ಡಿ ಹಾಕಿ, 5 ವರ್ಷದ ಅವಧಿಗೆ ಮಾಸಿಕ ರೂ.12,401 ಇಎಂಐ ಪಾವತಿಸಬೇಕು.

ಮಾರುತಿ ಸುಜುಕಿ ಇಕೋ ವ್ಯಾನ್‌ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 104.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ ಆಯ್ಕೆಯನ್ನು ಪಡೆದಿದೆ. ಆದರೆ, 72 ಪಿಎಸ್ ಅಶ್ವ ಶಕ್ತಿ ಹಾಗೂ 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ.

Maruti Suzuki Eeco On Road Price And Emi Details

ಈ ವ್ಯಾನ್‌, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಒಳಗೊಂಡಿದೆ. ಜೊತೆಗೆ 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಮಾರುತಿ ಸುಜುಕಿ ಇಕೋ ವ್ಯಾನ್‌ ಸೆಮಿ-ಡಿಜಿಟಲ್ ಸ್ಪೀಡೋಮೀಟರ್ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ. ನಿಮ್ಮ ಗಮನಕ್ಕೆ.. ಈ ಇಕೋ ವ್ಯಾನ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Sunday, October 13, 2024, 14:00 [IST]
English summary
Maruti suzuki eeco on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+