Maruti: ಮಾರುತಿ ಸುಜುಕಿಯ ಈ ಕಾರಿಗೆ ಮನಸೋತ ಗ್ರಾಹಕರು.. ರೂ.5.32 ಲಕ್ಷ ಬೆಲೆ, 26 ಕಿ.ಮೀ ಮೈಲೇಜ್!
ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ಆಲ್ಟೊ ಕೆ10, ಸೆಲರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬ್ರೆಝಾ, ಎರ್ಟಿಗಾ, ಡಿಜೈರ್ ಹಾಗೂ ಫ್ರಾಂಕ್ಸ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಮಾರುತಿ ಸುಜುಕಿ ಜೂನ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದೆ. ಓಮ್ನಿ ಜಾಗಕ್ಕೆ ಬಂದ ಜನಪ್ರಿಯ ಇಕೋ (Eeco) ವ್ಯಾನ್ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ, ಜೂನ್ (2024)ನಲ್ಲಿ ಬರೋಬ್ಬರಿ 10,771 ಯುನಿಟ್ ಇಕೋ ವ್ಯಾನ್‌ಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 9,354 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ 15.15% ಪ್ರಗತಿ ಸಾಧಿಸಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಇಕೋ (Maruti Suzuki Eeco) ವ್ಯಾನ್ ರೂ.5.32 ಲಕ್ಷದಿಂದ ರೂ.6.58 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಇಕೋ ವ್ಯಾನ್ 5 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ವಾರಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 275 ರಿಂದ 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ಮಾರುತಿ ಸುಜುಕಿ ಇಕೋ ವ್ಯಾನ್ ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 81 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 104.4 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 72 ಪಿಎಸ್ ಶಕ್ತಿ ಮತ್ತು 95 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಇಕೋ ವ್ಯಾನ್ ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 19.71 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 26.78 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತವೆ. ಜೊತೆಗೆ ಈ ಕಾರು ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಮಿಡ್ನೈಟ್ ಬ್ಲ್ಯಾಕ್, ಮೆಟಾಲಿಕ್ ಬ್ರಿಸ್ಕ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಮಾರುತಿ ಸುಜುಕಿ ಇಕೋ ವ್ಯಾನ್ ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಹೊಂದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಇಕೋ ವ್ಯಾನ್‌ಗೆ ಯಾವುದೇ ನೇರ ಪ್ರತಿಸ್ಪರ್ಧಿಯಿಲ್ಲ. ನೀವು ಬಜೆಟ್ ಬೆಲೆಗೆ ಹೆಚ್ಚು ಮೈಲೇಜ್ ನೀಡುವ ಕಾರನ್ನು ಹುಡುಕುತ್ತಿದ್ದರೆ, ಈ ಇಕೋ ವ್ಯಾನ್ ಉತ್ತಮ ಆಯ್ಕೆಯಾಗಲಿದೆ. 5 ಅಥವಾ 7 ಆಸನ ವ್ಯವಸ್ಥೆಯೊಂದಿಗೆ ದೊರೆಯುವುದರಿಂದ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗುವವರಿಗೂ ದೊಡ್ಡಮಟ್ಟದಲ್ಲಿ ಅನುಕೂಲವಾಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications