27 Km ಮೈಲೇಜ್.. 7-ಸೀಟರ್, 5 ಲಕ್ಷ.. ಹೊಸ 'ಇಕೋ' ವ್ಯಾನ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಮಾರುತಿ ಸುಜುಕಿ ಇಕೋ (Maruti Suzuki Eeco) ಪ್ರಖ್ಯಾತ ವ್ಯಾನ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕಳೆದ ತಿಂಗಳು (ನವೆಂಬರ್-2024) ಬರೋಬ್ಬರಿ 10,589 ಯುನಿಟ್ ಇಕೋ ವ್ಯಾನ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ 10,226 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ನೀವು ಹೊಚ್ಚ ಹೊಸ ಕಾರನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ರೂ.5.32 ಲಕ್ಷದಿಂದ ರೂ.6.58 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರುವ ಈ ಇಕೋ ವ್ಯಾನ್ ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದರ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ನೂತನ ಮಾರುತಿ ಸುಜುಕಿ ಇಕೋ ವ್ಯಾನ್‌ನ ವಿವಿಧ ರೂಪಾಂತರಗಳು (ವೇರಿಯೆಂಟ್) ಖರೀದಿಗೆ ಲಭ್ಯವಿವೆ. ಈ ಕಾರಿನ 5-ಸೀಟರ್ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.6 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.4 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.8,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Eeco Van On Road Price Mileage And Emi Details

ಈ ಇಕೋ ವ್ಯಾನ್‌ನ 7-ಸೀಟರ್ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.6.17 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.8,500 ವರೆಗೆ ಇಎಂಐ ಪಾವತಿ ಮಾಡಬೇಕು.

ನೂತನ ಮಾರುತಿ ಸುಜುಕಿ ಇಕೋ ವ್ಯಾನ್‌ನ 5-ಸೀಟರ್ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.6.40 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.4.40 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.9,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Eeco Van On Road Price Mileage And Emi Details

ಹೊಸ ಇಕೋ ವ್ಯಾನ್‌ನ 5-ಸೀಟರ್ ಎಸಿ ಸಿಎನ್‌ಜಿ ರೂಪಾಂತರ, ರೂ.7.50 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಖರೀದಿಸಿದರೆ ರೂ.5.50 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ 11,000 ವರೆಗೆ ಇಎಂಐ ಪಾವತಿಸಬೇಕು.

ಈ ಮಾರುತಿ ಸುಜುಕಿ ಇಕೋ ವ್ಯಾನ್ ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 104.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಹೊಂದಿದೆ. ಆದರೆ, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ.

ನೂತನ ಇಕೋ ವ್ಯಾನ್‌ 5-ಸ್ಪೀಡ್ ಮ್ಯಾನುವಲ್ ಗೇರ್‌ ಬಾಕ್ಸ್‌ನ್ನು ಮಾತ್ರ ಒಳಗೊಂಡಿದೆ. 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ಸಾಗಿಸಲು ರೂಪಾಂತರಗಳಿಗೆ ಅನುಗುಣವಾಗಿ 275 ರಿಂದ 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಮಾರುತಿ ಇಕೋ ವ್ಯಾನ್ ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ ಮತ್ತು ಮೆಟಾಲಿಕ್ ಬ್ರಿಸ್ಕ್ ಬ್ಲೂ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸೆಮಿ-ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ ಹಾಗೂ 12ವಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.

ನಾವಿಲ್ಲಿ ವಿವರಿಸಲಾದ ಮಾರುತಿ ಸುಜುಕಿ ಇಕೋ ವ್ಯಾನ್‌ನ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Friday, December 13, 2024, 12:38 [IST]
English summary
Maruti suzuki eeco van on road price mileage and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+