Ertiga: ಮಾರುತಿ ಸುಜುಕಿ ಎರ್ಟಿಗಾ ಕಾರಿಗಾಗಿ ಕ್ಯೂ ನಿಂತ ಗ್ರಾಹಕರು.. 8 ಲಕ್ಷ ಬೆಲೆ, 26 ಕಿ.ಮೀ ಮೈಲೇಜ್

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯ ಜನಪ್ರಿಯ ಎರ್ಟಿಗಾ (Ertiga) ಎಂಪಿವಿಗೆ ಭಾರೀ ಬೇಡಿಕೆ ಬಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ.

ಮಾರ್ಚ್ ತಿಂಗಳ ಮಾರಾಟ ವರದಿಯನ್ನು ವಿವಿಧ ಕಾರು ತಯಾರಕರು ಪ್ರಕಟಿಸಿದ್ದು, 'ಮಾರುತಿ ಸುಜುಕಿ ಎರ್ಟಿಗಾ' ದೇಶದಲ್ಲಿ ಅತಿಹೆಚ್ಚು ಮಾರಾಟವಾಗುವ ಕಾರುಗಳ ಪಟ್ಟಿಯಲ್ಲಿಯೂ ಸ್ಥಾನವನ್ನು ಪಡೆದಿದೆ. ಮಾರ್ಚ್ (2024)ನಲ್ಲಿ 14,888 ಯುನಿಟ್ ಎರ್ಟಿಗಾ ಎಂಪಿವಿಗಳನ್ನು ಖರೀದಿದಾರರು ಕೊಂಡುಕೊಂಡಿದ್ದಾರೆ. ಅದೇ 2023ರ ಮಾರ್ಚ್‌ಗೆ ಹೋಲಿಸಿದರೆ (9028 ಯುನಿಟ್) ವರ್ಷದಿಂದ ವರ್ಷಕ್ಕೆ ಶೇಕಡ 65% ಬೆಳವಣಿಗೆಯಾಗಿದೆ.

Maruti Suzuki Ertiga Car Sales 65 Growth In March 2024 Rs 8 Lakh Price 26 Km Mileage

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga), ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ ಹಾಗೂ ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಮಾರುತಿ ಸುಜುಕಿ ಎರ್ಟಿಗಾ 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 103 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 137 ಎನ್ಎಂ ಪೀಕ್ ಟಾರ್ಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಸಿಎನ್‌ಜಿ ಎಂಜಿನ್ ಪಡೆದಿರುವ ಕಾರು ಸಹ ಇದೇ ಎಂಜಿನ್ ಒಳಗೊಂಡಿದ್ದು, 88 ಪಿಎಸ್ ಪವರ್ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಮತ್ತು 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 7 ಮಂದಿ ಆರಾಮದಾಯಕವಾಗಿ ಪ್ರಯಾಣಿಬಹುದು.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga), 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್, ಆಟೋ ಎಸಿ ಸೇರಿದಂತೆ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ 209 ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಅತ್ಯಾಧುನಿಕವಾಗಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಟೊಯೊಟಾ ಇನ್ನೋವಾ ಕ್ರಿಸ್ಟಾ, ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, April 6, 2024, 10:20 [IST]
English summary
Maruti suzuki ertiga car sales 65 growth in march 2024 8 lakh price 26 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+