ಒಂದೊಳ್ಳೆ ಫ್ಯಾಮಿಲಿ ಕಾರನ್ನು ತೆಗೆದುಕೊಳ್ಳಬೇಕೇ.. 26 ಕಿ.ಮೀ ಮೈಲೇಜ್‌ನ 'ಎರ್ಟಿಗಾ' ಸಿಗುತ್ತದೆ 8 ಲಕ್ಷಕ್ಕೆ.. ಯೋಚಿಸಿ?
ಭಾರತದಲ್ಲಿ ಮಧ್ಯಮ ವರ್ಗದವರು ದೊಡ್ಡ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ತಮ್ಮ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರು ತೆಗೆದುಕೊಳ್ಳಬೇಕೆಂಬ ಕನಸನ್ನು ಹೊಂದಿರುತ್ತಾರೆ. ಆದಾಗ್ಯೂ ಬೃಹತ್ ಗಾತ್ರದ ಎಸ್‌ಯುವಿ ಮತ್ತು ಎಂಪಿವಿಗಳನ್ನು ಖರೀದಿಸುವಷ್ಟು ಆರ್ಥಿಕವಾಗಿ ಸಬಲರಾಗುವುದಿಲ್ಲ. ನೀವು ಸಹ ಫ್ಯಾಮಿಲಿ ಕಾರನ್ನು ಕೊಂಡುಕೊಳ್ಳಲು ಯೋಚಿಸಿದ್ದರೆ 'ಮಾರುತಿ ಎರ್ಟಿಗಾ' ಎಂಪಿವಿ ಹೆಚ್ಚು ಸೂಕ್ತವಾಗಲಿದೆ. ಕಳೆದ ತಿಂಗಳು (ಜೂನ್) ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಟಾಟಾ ಪಂಚ್, ಮಾರುತಿ ಸ್ವಿಫ್ಟ್ ಹಾಗೂ ಹ್ಯುಂಡೈ ಕ್ರೆಟಾ ಬಳಿಕ ಈ ಎಂಪಿವಿಯು ಸ್ಥಾನವನ್ನು ಪಡೆದಿದ್ದು, 15,902 ಯುನಿಟ್ ಮಾರಲಾಗಿದೆ.
ದೇಶೀಯವಾಗಿ ನೂತನ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದು ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳೊಂದಿಗೂ ಲಭ್ಯವಿದೆ.

ಹೊಸ ಎರ್ಟಿಗಾ ಎಂಪಿವಿ ರಸ್ತೆಯಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಹೊಂದಿದೆ. 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಸಿಗಲಿದ್ದು, ವಾರಂತ್ಯ ಹಾಗೂ ರಜಾದಿನಗಳಲ್ಲಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಜೊತೆಗೆ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 137 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ 88 ಪಿಎಸ್ ಶಕ್ತಿ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಎರ್ಟಿಗಾ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 26.11 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. ಈ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಡಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿಯನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ. ಎರ್ಟಿಗಾಗೆ ಕಿಯಾ ಕ್ಯಾರೆನ್ಸ್ (Kia Carens) ಮತ್ತು ಮಹೀಂದ್ರಾ ಮರಾಜೊ (Mahindra Marazzo) ಎಂಪಿವಿಗಳು ದೂಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications