2 ಕುಟುಂಬ ಪ್ರಯಾಣಿಸಬಹುದಾದ ಸಾಮಾನ್ಯ ಜನರ ಅಂಬಾರಿಗೆ ಭಾರೀ ಬೇಡಿಕೆ: ಖರೀದಿಗೆ ಮುಗಿಬಿದ್ದ ಜನ!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದೆ. ಅವರೆಲ್ಲರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ ದೊಡ್ಡ ಎಸ್‌ಯುವಿ ಹಾಗೂ ಪ್ರೀಮಿಯಂ ಎಂಪಿವಿಗಳನ್ನು ಕೊಳ್ಳುವಷ್ಟು ಹಣವಿರುವುದಿಲ್ಲ. ನೀವು ಕೂಡ ಫ್ಯಾಮಿಲಿ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿದ್ದರೆ, ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಉತ್ತಮ ಆಯ್ಕೆಯಾಗಲಿದೆ. ಮಾರುತಿ ಸುಜುಕಿ ಎರ್ಟಿಗಾ ಭಾರತದ ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಮತ್ತು ಅದಕ್ಕೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವ ಕಾರ್ ಆಗಿದೆ.
ಇತ್ತೀಚೆಗೆ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಹಾಗೂ ವಿವಿಧ ವಾಹನ ಉತ್ಪಾದನಾ ಕಂಪನಿಗಳು 2024ರ ಜನವರಿಯಿಂದ ಆಗಸ್ಟ್ ತಿಂಗಳವರೆಗಿನ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದವು. ಈ ಅವಧಿಯಲ್ಲಿ ಟಾಟಾ ಪಂಚ್ (142,072 ಯುನಿಟ್) ಮೊದಲ ಸ್ಥಾನದಲ್ಲಿದ್ದರೆ, ಮಾರುತಿ ಸುಜುಕಿಯ ಎರ್ಟಿಗಾ ಐದನೇ ಸ್ಥಾನವನ್ನು ಪಡೆದುಕೊಂಡಿದೆ.

ಈ ವರ್ಷದ ಮೊದಲರ್ಧದಲ್ಲಿ (ಜನವರಿ - ಆಗಸ್ಟ್ 2024) ಮಾರುತಿ ಸುಜುಕಿಯ ಎರ್ಟಿಗಾದ 122,659 ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ. ಇನ್ನು 2024ರ ಆಗಸ್ಟ್ ತಿಂಗಳಿನ ಮಾರುತಿ ಸುಜುಕಿ ಎರ್ಟಿಗಾದ ಮಾರಾಟದ ವರದಿ ಪ್ರಕಾರ, ಎರ್ಟಿಗಾದ 18,580 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು 2023ರ ಆಗಸ್ಟ್ ತಿಂಗಳಿನಲ್ಲಿ 12,315 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 51 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.
2024 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ 2 ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ ಇದೆ. ಈ 2 ಕಾರುಗಳ ನಡುವಿನ ವ್ಯತ್ಯಾಸ ಕೇವಲ 610 ಯುನಿಟ್ ಗಳಾಗಿವೆ. ಕಳೆದ ತಿಂಗಳು ಮಾರುತಿ ಬ್ರೆಝಾದ 19,190 ಯುನಿಟ್ ಗಳು ಮಾರಾಟವಾಗಿತ್ತು.

ಮಾರುತಿ ಸುಜುಕಿ ಎರ್ಟಿಗಾ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಪವರ್ ಹಾಗೂ 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇನ್ನು 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಆವೃತ್ತಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.

ನೂತನ ಎರ್ಟಿಗಾ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಎಂಪಿವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications