ಜನಪ್ರಿಯ ಫ್ಯಾಮಿಲಿ ಕಾರ್ ಎರ್ಟಿಗಾ ಗ್ರಾಹಕರಿಗೆ ಶಾಕ್ ನೀಡದ ಮಾರುತಿ ಸುಜುಕಿ!
ದೇಶದ ಅತಿದೊಡ್ದ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ಕಾರುಗಳನ್ನು ಮಾರಾಟ ಮಾಡುತ್ತಿದೆ. ಮಾರುತಿ ಸುಜುಕಿ ಕಂಪನಿಯು ಕೈಗೆಟುಕುವ ಬೆಲೆಯ ಕಾರುಗಳನ್ನು ಮಾರಾಟ ಮಾಡಿ, ದೊಡ್ಡಮಟ್ಟದ ಅಭಿಮಾನಿ ಬಳಗವನ್ನು ಹೊಂದಿದೆ. ಕಂಪನಿಯ ಜನಪ್ರಿಯ ಫ್ಯಾಮಿಲಿ ಕಾರಾಗಿರುವ ಎರ್ಟಿಗಾ (Ertiga)ವನ್ನು ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ.
ಈ ಕಾರಿಗೆ ಟೊಯೊಟಾ ಇನ್ನೋವಾ ಕ್ರಿಸ್ಟಾ, ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಪ್ರಬಲ ಪ್ರತಿಸ್ಪಧಿಯಾಗಿವೆ. ಕಳೆದ ತಿಂಗಳು, ಮಾರುತಿ ಸುಜುಕಿ ತನ್ನ ಎಲ್ಲಾ ಮಾದರಿಗಳ ಬೆಲೆಯನ್ನು 2024ರ ಜನವರಿ ತಿಂಗಳಿನಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿತು. ಹೆಚ್ಚುತ್ತಿರುವ ಸರಕುಗಳ ಬೆಲೆಗಳು ಮತ್ತು ಒಟ್ಟಾರೆ ಹಣದುಬ್ಬರವು ಇನ್‌ಪುಟ್ ವೆಚ್ಚವನ್ನು ಹೆಚ್ಚಿಸಿದೆ, ಇದರಿಂದಾಗಿ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ವಾಹನ ತಯಾರಕರು ಹೇಳಿದ್ದಾರೆ. ಮಾರುತಿ ಎರ್ಟಿಗಾ ಮಾದರಿಯ ಬೆಲೆಯನ್ನು ರೂ.5,000 ವರೆಗೆ ಹೆಚ್ಚಿಸಲಾಗಿದೆ.

ಬೆಲೆ ಏರಿಕೆಯ ಬಳಿಕ, ಮಾರುತಿ ಎರ್ಟಿಗಾ ಮಾದರಿಯ ಬೆಲೆಯು ಈಗ ರೂ. 8.69 ಲಕ್ಷದಿಂದ ರೂ. 13.03 ಲಕ್ಷವಾಗಿದ್ದು, ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಮಾದರಿಯು LXi(O), VXi(O), ZXi(O), ಮತ್ತು ZXi Plus ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಎರ್ಟಿಗಾ ಮಾದರಿಗೆ ಭಾರೀ ಬೇಡಿಕೆಯನ್ನು ಹೊಂದಿದೆ. ಮಾರುತಿ ಎಂಪಿವಿಯ CNG ರೂಪಾಂತರಗಳ ಬೇಡಿಕೆ ಹೆಚ್ಚಾಗಿದೆ.
ಪ್ರಸ್ತುತ, ಮಾರುತಿ ಸುಜುಕಿ ಎರ್ಟಿಗಾ ಕಾರಿನ LXi, VXi, ZXi ಮತ್ತು ZXi ಪ್ಲಸ್ ರೂಪಾಂತರಗಳಲ್ಲಿ ಲಭ್ಯವಿದೆ. ಈ ಮಾರುತಿ ಎಂಪಿವಿಯು ಪರ್ಲ್ ಮೆಟಾಲಿಕ್ ಶರತ್ಕಾಲ ಕೆಂಪು, ಡಿಗ್ನಿಟಿ ಬ್ರೌನ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಮಾರುತಿ ಸುಜುಕಿ ದೇಶೀಯ ಮಾರುಕಟ್ಟೆಯಲ್ಲಿ ನವೀಕರಿಸಿದ ಮಾರುತಿ ಎರ್ಟಿಗಾ ಎಂಪಿವಿಯನ್ನು ಕಳೆದ ವರ್ಷದ ಮಾರ್ಚ್ 15ರಂದು LXi ಹಾಗೂ VXi ಸೇರಿದಂತೆ ನಾಲ್ಕು ರೂಪಾಂತರಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಿತ್ತು. ಅಂದಿನಿಂದಲೇ ದೊಡ್ಡ ಮಟ್ಟದ ಬೇಡಿಕೆಯನ್ನು ಈ ಕಾರು ಪಡೆದುಕೊಂಡಿತು. ಇದು, ಏಳು ಆಸನ ಆಯ್ಕೆಯೊಂದಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಬಹುತೇಕರು, ತಮ್ಮ ಕುಟುಂಬದ ವಾಹನವಾಗಿ ಈ ಕಾರನ್ನೇ ಆಯ್ದುಕೊಳ್ಳುತ್ತಿದ್ದಾರೆ.
ಈ ಮಾರುತಿ ಎರ್ಟಿಗಾ ಕಾರು, 1.5 ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ, 5 ಸ್ವೀಡ್ ಮ್ಯಾನುವಲ್/ 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ . ಜೊತೆಗೆ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಉತ್ತಮವಾಗಿ ಮೈಲೇಜ್ ನೀಡಲಿದ್ದು, 20.51 ಕಿ.ಮೀ ರಿಂದ 26.11 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಈ ಮಾರುತಿ ಎರ್ಟಿಗಾ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ, 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಟರ್ನ್ ಬೈ ಟರ್ನ್ ನ್ಯಾವಿಗೇಶನ್ ಅನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.
ಇನ್ನು ಸಿಎನ್‌ಜಿ ಕಿಟ್ ಪಡೆದಿರುವ ಕಾರು, ಕೊಂಚ ಕಡಿಮೆ ಪವರ್ ಹೊರ ಹಾಕಲಿದ್ದು, ಕೇವಲ 88 PS ಪವರ್ ಮತ್ತು 121.5 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಮೈಲೇಜ್ ವಿಷಯದಲ್ಲೂ ಎರ್ಟಿಗಾ ಅತ್ಯುತ್ತಮವಾಗಿದ್ದು, ರೂಪಾಂತರಗಳಿಗೆ ಅನುಗುಣವಾಗಿ 20.51 kmpl ರಿಂದ 26.11 kmpl ಇಂಧನ ದಕ್ಷತೆಯನ್ನು ಹೊಂದಿದೆ.,
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications