ಕಡಿಮೆ ಬೆಲೆಗೆ ಅತ್ಯುತ್ತಮ ಕಾರು: 2 ಕುಟುಂಬ ಪ್ರಯಾಣಿಸಬಹುದಾದ ಸಾಮಾನ್ಯ ಜನರ ಅಂಬಾರಿಗೆ ಭಾರೀ ಬೇಡಿಕೆ

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದೆ. ಅವರೆಲ್ಲರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ ದೊಡ್ಡ ಎಸ್‌ಯುವಿ ಹಾಗೂ ಪ್ರೀಮಿಯಂ ಎಂಪಿವಿಗಳನ್ನು ಕೊಳ್ಳುವಷ್ಟು ಹಣವಿರುವುದಿಲ್ಲ. ನೀವು ಕೂಡ ಫ್ಯಾಮಿಲಿ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿದ್ದರೆ, ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಉತ್ತಮ ಆಯ್ಕೆಯಾಗಲಿದೆ. ಮಾರುತಿ ಸುಜುಕಿ ಎರ್ಟಿಗಾ ಭಾರತದ ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಮತ್ತು ಅದಕ್ಕೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಮಾರುತಿ ಸುಜುಕಿ ಎರ್ಟಿಗಾ ಕಾರು ಭಾರತದ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. 2024ರ ಆಗಸ್ಟ್ ತಿಂಗಳಿನ ಮಾರುತಿ ಸುಜುಕಿ ಎರ್ಟಿಗಾದ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2024ರ ಆಗಸ್ಟ್ ತಿಂಗಳಿನಲ್ಲಿ ಮಾರುತಿ ಸುಜುಕಿ ಎರ್ಟಿಗಾದ 18,580 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು 2023ರ ಆಗಸ್ಟ್ ತಿಂಗಳಿನಲ್ಲಿ 12,315 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 51 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

Maruti Suzuki Ertiga

2024 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ 2 ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ ಇದೆ. ಈ 2 ಕಾರುಗಳ ನಡುವಿನ ವ್ಯತ್ಯಾಸ ಕೇವಲ 610 ಯುನಿಟ್ ಗಳಾಗಿವೆ. ಕಳೆದ ತಿಂಗಳು ಮಾರುತಿ ಬ್ರೆಝಾದ 19,190 ಯುನಿಟ್ ಗಳು ಮಾರಾಟವಾಗಿತ್ತು.

ಹೊಸ ಎರ್ಟಿಗಾ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಪವರ್ ಹಾಗೂ 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇನ್ನು 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Maruti Suzuki Ertiga

ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಆವೃತ್ತಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.

ನೂತನ ಎರ್ಟಿಗಾ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ.

Maruti Suzuki Ertiga

ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 4 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಎಂಪಿವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 6, 2024, 16:51 [IST]
English summary
Maruti suzuki ertiga sales in august 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+