ಈ ಮಾರುತಿ ಕಾರಿಗೆ ಮುಗಿಬಿದ್ದ ಜನ: 8.69 ಲಕ್ಷ ರೂ. ಬೆಲೆ, 2 ಕುಟುಂಬ ಪ್ರಯಾಣಿಸಬಹುದು!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದೆ. ಅವರೆಲ್ಲರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ ದೊಡ್ಡ ಎಸ್‌ಯುವಿ ಹಾಗೂ ಪ್ರೀಮಿಯಂ ಎಂಪಿವಿಗಳನ್ನು ಕೊಳ್ಳುವಷ್ಟು ಹಣವಿರುವುದಿಲ್ಲ. ನೀವು ಕೂಡ ಫ್ಯಾಮಿಲಿ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿದ್ದರೆ, ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಉತ್ತಮ ಆಯ್ಕೆಯಾಗಲಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಮತ್ತು ಅದಕ್ಕೆ ತಕ್ಕಂತೆ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿದೆ. ಇನ್ನು ಹೆಚ್ಚು ಮೈಲೇಜ್ ಕೂಡ ಹೊಂದಿರುವುದರಿಂದ ಹೆಚ್ಚಿನ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಮಾರುತಿ ಸುಜುಕಿ ಎರ್ಟಿಗಾ ಕಾರು ಭಾರತದ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಎರ್ಟಿಗಾದ 15,701 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಎರ್ಟಿಗಾದ 14,352 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾರುತಿ ಸುಜುಕಿ ಎರ್ಟಿಗಾದ ಮಾರಾಟದಲ್ಲಿ ಶೇ.9.40 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಹೊಸ ಎರ್ಟಿಗಾ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಪವರ್ ಹಾಗೂ 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇನ್ನು 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಆವೃತ್ತಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.

ನೂತನ ಎರ್ಟಿಗಾ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಎಂಪಿವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಜನಪ್ರಿಯ ಮಾರುತಿ ಸುಜುಕಿ ಎರ್ಟಿಗಾ ಕಾರಿನ ಬೆಲೆಯು ದೆಹಲಿಯ ಎಕ್ಸ್ ಶೋರೂಂ ದರದಂತೆ ರೂ.8.69 ಲಕ್ಷದಿಂದ ರೂ.13.03 ಲಕ್ಷಗಳಾಗಿದೆ. ಈ ಜನಪ್ರಿಯ ಮಾರುತಿ ಸುಜುಕಿ ಎರ್ಟಿಗಾ LXi, VXi, ZXi, ಮತ್ತು ZXi+ ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಲಭ್ಯವಿದೆ. VXi ಮತ್ತು ZXi ಟ್ರಿಮ್‌ಗಳು ಸಿಎನ್‌ಜಿ ಕಿಟ್ ಆಯ್ಕೆಯೊಂದಿಗೆ ಬರುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications