Maruti Suzuki: ಈ ಜನಪ್ರಿಯ ಕಾರನ್ನು ಖರೀದಿಸುವವರಿಗೆ ಸಿಹಿಸುದ್ದಿ.. ಈಗ ಬಿಟ್ಟರೆ ಮತ್ತೆ ಸಿಗಲ್ಲ!
ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ, ಸೆಲೆರಿಯೊ, ಬಲೆನೊ, ವ್ಯಾಗನ್ಆರ್, ಇಗ್ನಿಸ್, ಜಿಮ್ನಿ ಸೇರಿದಂತೆ ವಿವಿಧ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಇವು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಈ ಜೂನ್‌ನಲ್ಲಿ 'ಫ್ರಾಂಕ್ಸ್' ಎಸ್‌ಯುವಿಯು ದೊಡ್ಡ ಮಟ್ಟದಲ್ಲಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಬನ್ನಿ.. ನೂತನ ಕಾರಿನ ಡಿಸ್ಕೌಂಟ್ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರು, ಒಟ್ಟು 20,000 ರಿಂದ 45,000ವರೆಗೆ ಡಿಸ್ಕೌಂಟ್ ಆಫರ್‌ನ್ನು ಹೊಂದಿದೆ. ಇದರಲ್ಲಿ ನಗದು ರಿಯಾಯಿತಿ, ವಿನಿಮಯ ಬೋನಸ್, ಹಾಗೂ ಕಾರ್ಪೊರೇಟ್ ರಿಯಾಯಿತಿಗಳು ಸೇರಿರಲಿವೆ. ಆದಾಗ್ಯೂ ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಪಡೆದಿರುವ ಈ ಕಾರು, ಸಿಗ್ಮಾ ಹಾಗೂ ಡೆಲ್ಟಾ ಪ್ಲಸ್ (ಒ) ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್ ಬಣ್ಣಗಳನ್ನು ಒಳಗೊಂಡಿದೆ.
ಈ ಫ್ರಾಂಕ್ಸ್ ಎಸ್‌ಯುವಿಯು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ (ಶಕ್ತಿ) ಮತ್ತು 148 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಪವರ್ ಹಾಗೂ 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಸಿಎನ್‌ಜಿ ಚಾಲಿತ ಮಾದರಿಯು 1.2-ಲೀಟರ್ ಎಂಜಿನ್ ಒಳಗೊಂಡಿದ್ದು, 77.5 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಹೊಚ್ಚ ಹೊಸ ಫ್ರಾಂಕ್ಸ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಪ್ರವಾಸದ ವೇಳೆ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6-ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಪ್ರಬಲ ಪ್ರತಿಸ್ಪರ್ಧಿಗಳಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications