Fronx: ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗೆ ರೂ.77,000 ರಿಯಾಯಿತಿ.. ರೂ.7 ಲಕ್ಷ ಬೆಲೆ, 28 ಕಿ.ಮೀ ಮೈಲೇಜ್
ದೇಶದಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಈ ಮಾರ್ಚ್ ತಿಂಗಳು ಅರೆನಾ ಹಾಗೂ ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ವಿವಿಧ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿಯ ಟರ್ಬೊ ಪೆಟ್ರೋಲ್ ಮಾದರಿಗಳು, ಒಟ್ಟು ರೂ.77,000 ಡಿಸ್ಕೌಂಟ್ ಆಫರ್ ಪಡೆದಿವೆ. ಅದರಲ್ಲಿ ವೆಲಾಸಿಟಿ ಎಡಿಷನ್ ರೂ.60,000 ಆಕ್ಸೆಸರಿ ಡಿಸ್ಕೌಂಟ್ (Accessory Discount) ಅನ್ನು ಹೊಂದಿದೆ. ಜೊತೆಗೆ ರೂ.10,000 ವಿನಿಮಯ ಬೋನಸ್ ಮತ್ತು ರೂ.7,000 ಕಾರ್ಪೊರೇಟ್ ರಿಯಾಯಿತಿಗಳು ಸೇರಿವೆ. ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಮಾದರಿಗಳು ರೂ.10,000 ನಗದು ರಿಯಾಯಿತಿ, 10,000 ವಿನಿಯಮ ಬೋನಸ್, ರೂ.7,000 ಕಾರ್ಪೊರೇಟ್ ರಿಯಾಯಿತಿಯನ್ನು ಒಳಗೊಂಡಿವೆ.

ಸದ್ಯ ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ರೂ.Rs.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಇದು ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಆಲ್ಪಾ ಸೇರಿದಂತೆ ವಿವಿಧ ರೂಪಾಂತರ ಹಾಗೂ ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಅನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೂ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 20.1 ಹಾಗೂ 21.79 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 28.51 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ವಿನ್ಯಾಸದ ದೃಷ್ಟಿಯಿಂದಲೂ ಈ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಅತ್ಯಾಕರ್ಷಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನದೊಂದಿಗೆ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್ ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರು ಸುರಕ್ಷತೆಯ ವಿಚಾರದಲ್ಲೂ ಅತ್ಯಾಧುನಿಕವಾಗಿದೆ. 6 ಏರ್ ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಈ ಫ್ರಾಂಕ್ಸ್ ಎಸ್‌ಯುವಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಎಕ್ಸ್‌ಟರ್, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಸಿಟ್ರಸ್ ಸಿ3 ಕಾರುಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications