ಜನ ಮೆಚ್ಚಿದ ಮಾರುತಿ ಸುಜುಕಿಯ ಈ ಕಾರಿಗೆ ಆಕರ್ಷಕ ರಿಯಾಯಿತಿ.. ರೂ.7.51 ಲಕ್ಷ ಬೆಲೆ, 28 ಕಿ.ಮೀ ಮೈಲೇಜ್

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಇವು ನವೀನ ಶೈಲಿಯ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯು ಮಾರಾಟಗೊಳಿಸುವ ಫ್ರಾಂಕ್ಸ್ (Fronx) ಜನಪ್ರಿಯ ಎಸ್‌ಯುವಿಯಾಗಿದೆ. ಈ ಆಗಸ್ಟ್‌ ತಿಂಗಳು ಆಕರ್ಷಕ ರಿಯಾಯಿತಿ ಪ್ರಯೋಜನ ಹೊಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ಒಟ್ಟು 13,000 ರಿಂದ 43,000ವರೆಗೆ ರಿಯಾಯಿತಿ ಪಡೆದಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ ಮತ್ತು ಡೆಲ್ಟಾ ಪ್ಲಸ್ (ಒ) ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯನ್ನು ಪಡೆದಿದೆ.

Maruti Suzuki Fronx Car Have Good Discount In August 2024 Details

ಫ್ರಾಂಕ್ಸ್ ಕಾರು ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ (ಶಕ್ತಿ) ಹಾಗೂ 148 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಶಕ್ತಿ ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Maruti Suzuki Fronx Car Have Good Discount In August 2024 Details

ಸಿಎನ್‌ಜಿ ಚಾಲಿತ ರೂಪಾಂತರವು ಇದೇ 1.2-ಲೀಟರ್ ಎಂಜಿನ್‌‌ನ್ನು ಪಡೆದಿದೆ. 77.5 ಪಿಎಸ್ ಗರಿಷ್ಠ ಶಕ್ತಿ ಮತ್ತು 98.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸಲಿದ್ದು, 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

Maruti Suzuki Fronx Car Have Good Discount In August 2024 Details

ಫ್ರಾಂಕ್ಸ್ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಗಳಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, August 12, 2024, 10:30 [IST]
English summary
Maruti suzuki fronx car have good discount august 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+