FRONX: ಮಾರುತಿ ಸುಜುಕಿ ಫ್ರಾಂಕ್ಸ್ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಫ್ರಾಂಕ್ಸ್ (FRONX) ಎಸ್‌ಯುವಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki FRONX) ಎಸ್‌ಯುವಿಯ ಬೇಸ್ ವೇರಿಯೆಂಟ್ ಸಿಗ್ಮಾ (ಪೆಟ್ರೋಲ್) ರೂ.9.09, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಡೆಲ್ಟಾ ಪ್ಲಸ್ (ಪೆಟ್ರೋಲ್) ರೂ.10.59 ಲಕ್ಷ, ಬೇಸ್ ಮಾಡೆಲ್ ಸಿಗ್ಮಾ (ಸಿಎನ್‌ಜಿ) ರೂ.10.22 ಲಕ್ಷ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೊಂಡುಕೊಳ್ಳುವ ಡೆಲ್ಟಾ (ಸಿಎನ್‌ಜಿ) ರೂ.11.24 ಆನ್-ರೋಡ್ ಬೆಲೆಯನ್ನು ಪಡೆದಿದೆ.

Maruti Suzuki Fronx Car On Road Price Emi Details

ನೀವು ಈ ಕಾರನ್ನು ರೂ.91,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.17,293 ಇಎಂಐ ಕಟ್ಟಬೇಕು. ವಿನ್ಯಾಸದ ದೃಷ್ಟಿಯಿಂದಲೂ ಫ್ರಾಂಕ್ಸ್ ಎಸ್‌ಯುವಿ ಅತ್ಯುತ್ತಮವಾಗಿದೆ. ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ಫ್ರಾಂಕ್ಸ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ (ಶಕ್ತಿ) ಹಾಗೂ 148 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್ ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

Maruti Suzuki Fronx Car On Road Price Emi Details

ಸಿಎನ್‌ಜಿ ಕಿಟ್ ಪಡೆದಿರುವ ಕಾರು ಕೂಡ 1.2-ಲೀಟರ್ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 77.5 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 98.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿನ ಪೆಟ್ರೋಲ್ ರೂಪಾಂತರಗಳು 20.1 ರಿಂದ 22.89 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 28.51 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತವೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Fronx Car On Road Price Emi Details

ಈ ಕಾರು ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾ, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ. ಫ್ರಾಂಕ್ಸ್ ಎಸ್‌ಯುವಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ತಿಳಿಸಲಾದ ಆನ್-ರೋಡ್ ಬೆಲೆ, ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, April 21, 2024, 11:30 [IST]
English summary
Maruti suzuki fronx car on road price emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+