Maruti Suzuki: 28 ಕಿ.ಮೀ ಮೈಲೇಜ್.. 7.51 ಲಕ್ಷದ ಈ ಜನಪ್ರಿಯ ಕಾರು ಪಡೆಯಲಿದೆ ಗರಿಷ್ಠ ಸುರಕ್ಷತಾ ವೈಶಿಷ್ಟ್ಯ, ಏನದು?
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 2023ರ ಏಪ್ರಿಲ್‌ನಲ್ಲಿ ಬಲೆನೊ ಆಧಾರಿತ ನೂತನ ಫ್ರಾಂಕ್ಸ್ (Fronx) ಎಸ್‌ಯುವಿಯನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಅಂದಿನಿಂದಲೇ ಈ ಕಾರು ಭಾರಿ ಬೇಡಿಕೆ ಪಡೆದುಕೊಂಡಿದ್ದು, ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ. ಇದರಲ್ಲಿ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳಿದ್ದರೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹೊಂದಿರಲಿಲ್ಲ. ಬಹುತೇಕ ಈ ವೈಶಿಷ್ಟ್ಯ (ಫೀಚರ್) ಪಡೆದುಕೊಂಡಿರುವ ಫ್ರಾಂಕ್ಸ್ ಎಸ್‌ಯುವಿವೊಂದು ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ ಎಂದು ವರದಿಯಾಗಿದೆ.
ಸದ್ಯ, ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಪರೀಕ್ಷಾರ್ಥ ಓಡಾಟ ನಡೆಸುವ ಸೆರೆಹಿಡಿಯಲಾದ ಸ್ಪೈ (ಪತ್ತೇದಾರಿ) ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಫೋಟೋಗಳಲ್ಲಿ ಕಾರಿನ ಮುಂಭಾಗದ (ಫ್ರಂಟ್) ಗ್ರಿಲ್‌ನಲ್ಲಿ ಎಡಿಎಎಸ್ ಸೆನ್ಸರ್ (ADAS sensor) ಹೊಂದಿರುವುದನ್ನು ಗುರುತಿಸಬಹುದು. ಆದಾಗ್ಯೂ ನೂತನ ಸುರಕ್ಷತಾ ವೈಶಿಷ್ಟ್ಯದೊಂದಿಗೆ ಫ್ರಾಂಕ್ಸ್ ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಕುರಿತಂತೆ ಯಾವುದೇ ವಿವರಗಳು ಲಭ್ಯವಿಲ್ಲ.

ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯ ಎಂಬುದು ಹತ್ತಾರು ಅಂಶಗಳನ್ನು (Elements) ಒಳಗೊಂಡಿರಲಿದೆ. ಇದರಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಆಟೋಮೆಟಿಕ್ ಪಾರ್ಕಿಂಗ್, ಟ್ರಾಕ್ಷನ್ ಕಂಟ್ರೋಲ್, ರೇರ್ ಕ್ರಾಸ್ ಟ್ರಾಫಿಕ್ ಅಲರ್ಟ್, ಡ್ರೈವರ್ ಮಾನಿಟರಿಂಗ್ ಸಿಸ್ಟಮ್, ಹೈ-ಬೀಮ್ ಅಸಿಸ್ಟ್ & ಡ್ರೈವಿಂಗ್ ಕಂಟ್ರೋಲ್ ಅಸಿಸ್ಟೆನ್ಸ್ ಗಳು ಸೇರಿರಲಿವೆ.
ಪ್ರಸ್ತುತ ದೇಶೀಯವಾಗಿ ಲಭ್ಯವಿರುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಮತ್ತು ಆಲ್ಪಾ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ. ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯಲ್ಲಿ 5 ಮಂದಿ ಓಡಾಟ ನಡೆಸಬಹುದು. 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications