Maruti Suzuki: ಈ ಜನಪ್ರಿಯ ಕಾರುಗಳಿಗೆ ರೂ.79,000 ರವರೆಗೆ ರಿಯಾಯಿತಿ.. ರೂ.6 ಲಕ್ಷ ಆರಂಭಿಕ ಬೆಲೆ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಳೆದ ಕೆಲವು ತಿಂಗಳಿಂದ ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮತ್ತು ಜಿಮ್ನಿ ಕಾರುಗಳ ಮೇಲೆ ಆಕರ್ಷಕ ರಿಯಾಯಿತಿಯನ್ನು ನೀಡುತ್ತಿದ್ದು, ಈ ಮಾರ್ಚ್‌ನಲ್ಲಿ ಕೂಡ ಮುಂದುವರಿಸಿದೆ.
ಮೊದಲಿಗೆ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ (Baleno) ಪಡೆದಿರುವ ಡಿಸ್ಕೌಂಟ್ ಆಫರ್ ಬಗ್ಗೆ ಮಾತನಾಡೋಣ. ಈ ಕಾರಿನ ಪೆಟ್ರೋಲ್ ರೂಪಾಂತರಗಳು ಒಟ್ಟು ರೂ.48,000 ಹಾಗೂ ಸಿಎನ್‌ಜಿ ಮಾದರಿಗಳು ರೂ.33,000 ವರೆಗೆ ರಿಯಾಯಿತಿ ಸೌಲಭ್ಯವನ್ನು ಹೊಂದಿವೆ. ಸಿಯಾಜ್ (Ciaz) ಹಾಗೂ ಎಕ್ಸ್ಎಲ್6 (XL6) ಕಾರುಗಳು ಕ್ರಮವಾಗಿ ರೂ.53,000 ಮತ್ತು ರೂ.20,000 ಡಿಸ್ಕೌಂಟ್ ಪಡೆದಿವೆ.

ಮಾರುತಿ ಸುಜುಕಿ ಕಂಪನಿಯ ಪ್ರಮುಖ ಎಸ್‌ಯುವಿ ಗ್ರ್ಯಾಂಡ್ ವಿಟಾರಾ (Grand Vitara) ಮಾತ್ರ ದೊಡ್ಡಮಟ್ಟದಲ್ಲಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಇದರ ಸಿಎನ್‌ಜಿ ಮಾದರಿ ರೂ.4,000 ಡಿಸ್ಕೌಂಟ್ ಆಫರ್ ಒಳಗೊಂಡಿದ್ದು, ಇತರೆ ಮಾದರಿಗಳು ರೂ.59,000 ರಿಯಾಯಿತಿಯನ್ನು ಪಡೆದಿವೆ. ಹೈಬ್ರಿಡ್ ರೂಪಾಂತರ ರೂ.79,000 ರವರೆಗೆ ರಿಯಾಯಿತಿ ಸೌಲಭ್ಯವನ್ನು ಹೊಂದಿದೆ.
ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಫ್ರಾಂಕ್ಸ್ ಎಸ್‌ಯುವಿ ಕೂಡ ಉತ್ತಮ ರಿಯಾಯಿತಿ ಪ್ರಯೋಜನವನ್ನು ಒಳಗೊಂಡಿದೆ. ಈ ಕಾರಿನ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿ ರೂ.20,000 ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಆವೃತ್ತಿ ರೂ.55,000 ಡಿಸ್ಕೌಂಟ್ ಆಫರ್ ಪಡೆದಿದೆ. ಮುಂಬೈ ಹಾಗೂ ರತ್ನಗಿರಿಯಲ್ಲಿ ಜಿಮ್ನಿ ರೂ.1.5 ಲಕ್ಷ ರಿಯಾಯಿತಿಯನ್ನು ಒಳಗೊಂಡಿದ್ದರೆ, ಗೋವಾದಲ್ಲಿ ರೂ.50,000 ಡಿಸ್ಕೌಂಟ್ ಹೊಂದಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್, ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 19.38 ರಿಂದ 27.97 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಬಲೆನೊ ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 22.35 ರಿಂದ 30.61 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, -ಆಪಲ್ ಕಾರ್ ಪ್ಲೇ, ಆರ್ಕಮಿಸ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್ ಬ್ಯಾಗ್ ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಯಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ದೇಶದ ವಿವಿಧ ಭಾಗದಲ್ಲಿ ಗರಿಷ್ಠ ರಿಯಾಯಿತಿ ಪಡೆದಿರುವ ಮಾರುತಿ ಸುಜುಕಿ ಜಿಮ್ನಿ, ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಯಾಜ್ ರೂ.9.40 ಲಕ್ಷ ಹಾಗೂ ಎಕ್ಸ್ಎಲ್6 ರೂ.11.61 ಲಕ್ಷ ಆರಂಭಿಕ ಬೆಲೆಯನ್ನು ಪಡೆದಿದೆ. ಗಮನಿಸಿ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂ ಸಂಪರ್ಕಿಸಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications