ಮಾರುತಿಯ ಸ್ಟೈಲಿಷ್ ಎಸ್‌ಯುವಿ: 9 ಲಕ್ಷ ಬೆಲೆ... 6 ಏರ್‌ಬ್ಯಾಗ್... 28 ಕಿ.ಮೀ ಮೈಲೇಜ್!
ಮಾರುತಿ ಸುಜುಕಿ ಲೈನ್‌ಅಪ್‌ನಲ್ಲಿಯೇ ಅತ್ಯಂತ ಸ್ಟೈಲಿಷ್ ಎಸ್‌ಯುವಿ ಎಂಬ ಖ್ಯಾತಿ ಪಡೆದಿರುವ ಫ್ರಾಂಕ್ಸ್ ಎಸ್‌ಯುವಿ ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಇದು ಮಾರುತಿ ಸುಜುಕಿ ನೆಕ್ಸಾ ಲೈನಪ್‌ನಲ್ಲಿ ಸಿಗುವ ಪ್ರೀಮಿಯಂ ಕಾರಾಗಿದೆ. ಪ್ರಸ್ತುತ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಬೆಲೆಯು ರೂ.7.51 ಲಕ್ಷದಿಂದ ಆರಂಭವಾಗಿ ರೂ.13.04 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಬೆಂಗಳೂರಿನಲ್ಲಿ ಆನ್‌ರೋಡ್ ಬೆಲೆಯು 8.98 ಲಕ್ಷ ರೂ.ನಿಂದ ಆರಂಭವಾಗಿ 16 ಲಕ್ಷ ರೂ. ವರೆಗೆ ಇದೆ.
ಸುರಕ್ಷತೆಯಲ್ಲೂ ಸೈ: ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ 6 ಏರ್‌ಬ್ಯಾಗ್, ಹಿಲ್ ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾ, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ವೇರಿಯೆಂಟ್‌ಗಳನ್ನು ನೋಡುವುದಾದ್ರೆ ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಸಿಗ್ಮಾ, ಡೆಲ್ಟಾ ಪ್ಲಸ್ (ಒ) ಸೇರಿದಂತೆ ಒಟ್ಟು 16 ವಿವಿಧ ವೇರಿಯೆಂಟ್‌ಗಳಲ್ಲಿ ಲಭ್ಯವಿದೆ. ಫ್ರಾಂಕ್ಸ್ ಎಸ್‌ಯುವಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಕಾರುಗಳು ಪ್ರಮುಖ ಪ್ರತಿಸ್ಪರ್ಧಿಗಳಾಗಿವೆ.
ಬಣ್ಣಗಳು: ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಅರ್ಥನ್ ಬ್ರೌನ್, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಒಪ್ಯುಲೆಂಟ್ ರೆಡ್ ಸಿಂಗಲ್ ಟೋನ್‌ನಲ್ಲಿ ಸಿಕ್ಕರೇ, ಡ್ಯುಯಲ್-ಟೋನ್ ಆಯ್ಕೆಗಳಲ್ಲಿ ಅರ್ಥನ್ ಬ್ರೌನ್, ಒಪ್ಯುಲೆಂಟ್ ರೆಡ್ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಬರಲಿವೆ. ಇವೆಲ್ಲವೂ ಬ್ಲೂ ಬ್ಲ್ಯಾಕ್ ರೂಫ್‌ನೊಂದಿಗೆ ಬರುತ್ತವೆ. ಒಟ್ಟಾರೆ ಕಾರು ಒಂಬತ್ತು ಬಣ್ಣಗಳಲ್ಲಿ ಲಭ್ಯವಿದೆ.

ಎಂಜಿನ್ & ಮೈಲೇಜ್: ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯು 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಆವೃತ್ತಿಗಳು 20.1 ರಿಂದ 22.89 ಕಿ.ಮೀ ಮೈಲೇಜ್ ಹಾಗೂ ಸಿಎನ್‌ಜಿ ಮಾದರಿಗಳು 28.51 ಕಿ.ಮೀ/ಕೆ.ಜಿ ಮೈಲೇಜ್ ನೀಡುತ್ತವೆ.
ವೈಶಿಷ್ಟ್ಯಗಳು: ಈ ಮಾರುತಿ ಫ್ರಾಂಕ್ಸ್ (Maruti Fronx) ಎಸ್‍ಯುವಿಯ ಸಿಗ್ಮಾ ವೇರಿಯೆಂಟ್ ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ವೀಲ್ ಕವರ್‌ಗಳೊಂದಿಗೆ ಸ್ಟೀಲ್ ವೀಲ್‌ಗಳು, ಕೀಲೆಸ್ ಎಂಟ್ರಿ ಮತ್ತು ಗೋ, ಡ್ಯುಯಲ್-ಟೋನ್ ಇಂಟೀರಿಯರ್ ಮತ್ತು ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಅನ್ನು ಹೊಂದಿದೆ.
ಇವಿಷ್ಟೇ ಅಲ್ಲದೇ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications