Fronx: ಮಾರುತಿ ಸುಜುಕಿ ಫ್ರಾಂಕ್ಸ್ ಬೆಲೆ ಕುರಿತು ಬಿಗ್ ಅಪ್ಡೇಟ್, ಬೈಕ್‌ನಂತೆ ಮೈಲೇಜ್ ನೀಡುತ್ತದೆ ಈ ಕಾರು!
ಮಾರುತಿ ಸುಜುಕಿ (Maruti Suzuki), ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಜನವರಿ (2024) ತಿಂಗಳಿಂದ ವಿವಿಧ ಕಾರು ಮಾದರಿಗಳ ಬೆಲೆಯನ್ನು ಪರಿಷ್ಕರಣೆ ಮಾಡುತ್ತಿದೆ. ಸದ್ಯ, ಜನಪ್ರಿಯ ಫ್ರಾಂಕ್ಸ್ (Fronx) ಎಸ್‌ಯುವಿಯ ನೂತನ ದರಗಳ ಬಗ್ಗೆ ವಿವರಗಳು ಲಭ್ಯವಾಗಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ಸಿಗ್ಮಾ 1.2 ಎಂಟಿ, ಡೆಲ್ಟಾ 1.2 ಎಂಟಿ, ಸಿಗ್ಮಾ 1.2 ಸಿಎನ್‌ಜಿ ಮತ್ತು ಡೆಲ್ಟಾ ಪ್ಲಸ್ 1.2 ಎಂಟಿ ರೂಪಾಂತರಗಳ ಬೆಲೆ ರೂ.5,000 ಏರಿಕೆಯಾಗಿದೆ. ಅದೇ ರೀತಿಯಲ್ಲಿ ಜಿಟಾ 1.0 ಟರ್ಬೊ 6 ಎಟಿ, ಆಲ್ಪಾ 1.0 ಟರ್ಬೊ 6 ಎಟಿ ದರಗಳು ರೂ. 10,000 ವರೆಗೆ ಇಳಿಕೆಯಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ರೂ.7.51 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಜೊತೆಗೆ ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಬ್ಲೂಶ್ ಬ್ಲ್ಯಾಕ್ ಸೇರಿದಂತೆ 3 ಡುಯಲ್ ಟೋನ್, 7 ಮೊನೊಟೋನ್ ಬಣ್ಣಗಳೊಂದಿಗೆ ಸಿಗುತ್ತದೆ.
ಈ ಕಾರು, 3 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಗರಿಷ್ಠ ಪವರ್,148 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್ (ಎಂಟಿ) ಅಥವಾ 6 - ಸ್ವೀಡ್ ಆಟೋಮೆಟಿಕ್ (ಎಟಿ) ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರಿನ ಮತ್ತೊಂದು 1.2 - ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 90 ಪಿಎಸ್ ಪವರ್, 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ.
ಸಿಎನ್‌ಜಿ ಕಿಟ್ ಪಡೆದಿರುವ ಕಾರು, 1.2 - ಲೀಟರ್ ಎಂಜಿನ್ ಹೊಂದಿದ್ದು, 77.5 ಪಿಎಸ್ ಗರಿಷ್ಠ ಪವರ್, 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 20.1 ರಿಂದ 22.89 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 28.51 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತೆಯ ದೃಷ್ಟಿಯಿಂದ ಫ್ರಾಂಕ್ಸ್ ಎಸ್‌ಯುವಿ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಸೇರಿದಂತೆ ಹಲವು ಪ್ರತಿಸ್ಪರ್ಧಿಗಳಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications