ಜನ ಸರದಿ ಸಾಲಿನಲ್ಲಿ ನಿಂತು ಮಾರುತಿ ಫ್ರಾಂಕ್ಸ್ ಖರೀದಿ: ಮಾರಾಟದಲ್ಲಿ ಏರಿಕೆ
ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ (Maruti Suzuki) ಇಂಡಿಯಾ ಲಿಮಿಟೆಡ್ ಬಲೆನೊ ಆಧಾರಿತ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರನ್ನು ಬಿಡುಗಡೆಗೊಳಿಸಲಾಗಿತ್ತು. ಈ ಮಾರುತಿ ಸುಜುಕಿ ಫ್ರಾಂಕ್ಸ್ ಮಾದರಿಯು ಸೂಪರ್ ಹಿಟ್ ಆಗಿದ್ದು, ಭಾರತದ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಈ ಮಾರುತಿ ಸುಜುಕಿ ಫ್ರಾಂಕ್ಸ್ ಮಾದರಿಯ ಆಗಸ್ಟ್ ತಿಂಗಳ ಮಾರಾಟ ಅಂಕಿ ಅಂಶಗಳು ಬಹಿರಂಗವಾಗಿದ್ದು, ಕಳೆದ ತಿಂಗಳಿನ ಮಾರಾಟದಲ್ಲಿ ಈ ಮಾದರಿಯು ಸಣ್ಣ ಮಟ್ಟದಲ್ಲಿ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶ್ವಿಸಿಯಾಗಿದೆ.
2024ರ ಆಗಸ್ಟ್ ತಿಂಗಳಿನಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Fronx) ಮಾದರಿಯ 12,387 ಯುನಿಟ್ ಗಳು ಮಾರಾಟವಾಗಿವೆ. ಇನ್ನು 2023ರ ಆಗಸ್ಟ್ ತಿಂಗಳಿನಲ್ಲಿ ಫ್ರಾಂಕ್ಸ್ ಮಾದರಿಯ 12,164 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.2 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‍ಯುವಿಯು ಸಿಗ್ಮಾ, ಡೆಲ್ಟಾ, ಡೆಲ್ಟಾ +, ಡೆಲ್ಟಾ + (O), ಝೀಟಾ ಮತ್ತು ಆಲ್ಫಾ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿನಲ್ಲಿ 1.0 ಲೀಟರ್ ಟರ್ಬೊ ಮತ್ತು 1.2 ಲೀಟರ್ ನ್ಯಾಚುರಲ್ ಆಸ್ಪೈರರ್ಡ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ AMT ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ ಜೋಡಿಸಲಾಗಿದೆ. ಇದರಲ್ಲಿ 1.2 K12C ಲೀಟರ್ ನ್ಯಾಚುರಲ್ ಆಸ್ಪೈರರ್ಡ್ ಎಂಜಿನ್ 6,000rpm ನಲ್ಲಿ 88.5 bhp ಮತ್ತು 4,400rpm ನಲ್ಲಿ 113 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಬಲೆನೊ ಆರ್‌ಎಸ್‌ನೊಂದಿಗೆ ಕೊನೆಯದಾಗಿ ಕಂಡ ಟರ್ಬೋಚಾರ್ಜ್ಡ್ 1.0-ಲೀಟರ್ ಬೂಸ್ಟರ್‌ಜೆಟ್ ಎಂಜಿನ್ ಹೆಚ್ಚು ಪವರ್ ಫುಲ್ ಎಂಜಿನ್ ಆಗಿದೆ. ಫ್ರಾಂಕ್ಸ್ ಕಾರಿನಲ್ಲಿ ಈ ಎಂಜಿನ್ 5,500rpm ನಲ್ಲಿ 98.7bhp ಮತ್ತು 2,000 ರಿಂದ 4,500rpm ವರೆಗೆ 147.6Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಬೂಸ್ಟರ್‌ಜೆಟ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಆಗಿ ನೀಡಲಾಗಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಒಂಬತ್ತು ಬಣ್ಣಗಳಲ್ಲಿ ಲಭ್ಯವಿದೆ. ಇವುಗಳು ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಅರ್ಥನ್ ಬ್ರೌನ್, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಒಪ್ಯುಲೆಂಟ್ ರೆಡ್ ಆಗಿದೆ. ಇನ್ನು ಡ್ಯುಯಲ್-ಟೋನ್ ಆಯ್ಕೆಗಳಲ್ಲಿ ಅರ್ಥನ್ ಬ್ರೌನ್, ಒಪ್ಯುಲೆಂಟ್ ರೆಡ್ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿವೆ. ಇವೆಲ್ಲವೂ ಬ್ಲೂ ಬ್ಲ್ಯಾಕ್ ರೂಫ್ ಹೊಂದಿದೆ.
ಈ ಮಾರುತಿ ಫ್ರಾಂಕ್ಸ್ ಎಸ್‍ಯುವಿಯು ಸಿಗ್ಮಾ ರೂಪಾಂತರವು ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ವೀಲ್ ಕವರ್‌ಗಳೊಂದಿಗೆ ಸ್ಟೀಲ್ ವೀಲ್‌ಗಳು, ಕೀಲೆಸ್ ಎಂಟ್ರಿ ಮತ್ತು ಗೋ, ಡ್ಯುಯಲ್-ಟೋನ್ ಇಂಟೀರಿಯರ್ ಮತ್ತು ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆಫ್ಯಾಬ್ರಿಕ್ ಸೀಟ್ ಅಪ್ಹೋಲ್‌ಸ್ಟರಿ, ಸ್ಟೀರಿಂಗ್‌ಗಾಗಿ ಟಿಲ್ಟ್ ಹೊಂದಾಣಿಕೆ, 60:40, ಸೀಟ್ ಸ್ಪ್ಲಿಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿಯರ್ ಡಿಫಾಗರ್ ಅನ್ನು ಹೊಂದಿದೆ.

ಮಾರುತಿ ಫ್ರಾಂಕ್ಸ್ ಆಲ್ಫಾ ಟ್ರಿಮ್ 16-ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ ಗಳು ಮತ್ತು ಡ್ಯುಯಲ್-ಟೋನ್ ಬಾಹ್ಯ ಬಣ್ಣಗಳನ್ನು ಒಳಗೊಂಡಿವೆ. ಇದರೊಂದಿಗೆ 360 ಡಿಗ್ರಿ ಕ್ಯಾಮೆರಾ, HUD ಯುನಿಟ್, ಕ್ರೂಸ್ ಕಂಟ್ರೋಲ್ ಮತ್ತು ಲೆದರ್ ಸುತ್ತುವ ಸ್ಟೀರಿಂಗ್ ವೀಲ್ ಸೇರಿದಂತೆ ಕೆಲವು ವಿಶೇಷ ಫೀಚರ್ಸ್ ಗಳೊಂದಿಗೆ ಬರಲಿದೆ. ಇನ್ನು
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಇನ್ನು ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications