Fronx: ಜನಪ್ರಿಯ ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗೆ ರೂ.20,000 ರಿಯಾಯಿತಿ.. 28 ಕಿ.ಮೀ ಮೈಲೇಜ್, 7 ಲಕ್ಷ ಬೆಲೆ
ದೇಶಾದ್ಯಂತ ಆಯ್ದ ಮಾರುತಿ ಸುಜುಕಿ (Maruti Suzuki) ಡೀಲರ್‌ಗಳು, ಅರೆನಾ ಮತ್ತು ನೆಕ್ಸಾ ಶೋರೂಂ ಮೂಲಕ ಮಾರಾಟಗೊಳಿಸುವ ವಿವಿಧ ಕಾರುಗಳ ಮೇಲೆ ಈ ಜನವರಿ ತಿಂಗಳು ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಿಸಿವೆ. ಇದು ನಗದು ರಿಯಾಯಿತಿ, ವಿನಿಮಯ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಒಳಗೊಂಡಿದೆ.
ಬಹುಬೇಡಿಕೆಯ ಬಲೆನೊ ಆಧಾರಿತ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ಒಟ್ಟು ರೂ.20,000 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರಲ್ಲಿ ರೂ.15,000 ನಗದು ರಿಯಾಯಿತಿ (Cash Discount) ರೂ.5,000 ಕಾರ್ಪೊರೇಟ್ ಡಿಸ್ಕೌಂಟ್ (Corporate Discount) ಅನ್ನು ಪಡೆದಿದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ, ಬಣ್ಣವನ್ನು ಆಧರಿಸಿ, ಈ ರಿಯಾಯಿತಿ ಸೌಲಭ್ಯಗಳು ಬೇರೆಯಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್‌ಶಿಪ್‌ನ್ನು ಸಂಪರ್ಕಿಸಿರಿ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ರೂ.7.46 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಸೇರಿದಂತೆ ಹಲವು ರೂಪಾಂತರ, ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಒಳಗೊಂಡಂತೆ 3-ಡ್ಯೂಯಲ್ ಟೋನ್, 7-ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಸಿಗಲಿದ್ದು, ಇದರ 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಪವರ್, 148 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಮತ್ತೊಂದು, 1.2 - ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 90 PS ಗರಿಷ್ಠ ಪವರ್, 113 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಎಎಂಟಿ (ಆಟೋಮೆಟಿಕ್) ಗೇರ್ ಬಾಕ್ಸ್ ನೊಂದಿಗೆ ಗ್ರಾಹಕರಿಗೆ ಸಿಗುತ್ತದೆ.
ಸಿಎನ್‌ಜಿ ಕಿಟ್ ಪಡೆದಿರುವ ಕಾರು, 1.2 - ಲೀಟರ್ ಎಂಜಿನ್ ಹೊಂದಿದೆ. ಆದರೆ, 77.5 PS ಪವರ್, 98.5 Nm ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದ್ದು, ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಮಾರುತಿ ಸುಜುಕಿ ಫ್ರಾಂಕ್ಸ್ ಪೆಟ್ರೋಲ್ ರೂಪಾಂತರಗಳು 20.1 kmpl - 22.89 kmpl, ಸಿಎನ್‌ಜಿ ರೂಪಾಂತರಗಳು 28.51 km/kg ಇಂಧನ ದಕ್ಷತೆಯನ್ನು ಹೊಂದಿವೆ.

ಈ ಕಾರು, 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, ವಿನ್ಯಾಸದ ದೃಷ್ಟಿಯಿಂದ ಕೂಡ ಅತ್ಯುತ್ತಮವಾಗಿದೆ. ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಫ್ರಾಂಕ್ಸ್ ಎಸ್‌ಯುವಿ 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್ ಆಟೋ ಕ್ಲೈಮೇಟ್ ಕಂಟ್ರೋಲ್ ಅನ್ನು ಪಡೆದಿದೆ.
ಸುರಕ್ಷತೆಯಲ್ಲೂ ಈ ಕಾರಿಗೆ ಸರಿ ಸಾಟಿಯಿಲ್ಲ. 6 - ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ - ಹೋಲ್ಡ್ ಅಸಿಸ್ಟ್, 360 - ಡಿಗ್ರಿ ಕ್ಯಾಮೆರಾ, ISOFIX ಚೈಲ್ಡ್ ಸೀಟ್ ಆಂಕರ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ. ಫ್ರಾಂಕ್ಸ್ ಎಸ್‌ಯುವಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ ಸೇರಿದಂತೆ ಹಲವು ಕಾರುಗಳಿಗೆ ಪ್ರತಿಸ್ಪರ್ಧಿಗಳಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications